ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಮುಂದುವರಿದ ಚಳಿಯ ಅಬ್ಬರ: ನಾಳೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಕನಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುತ್ತಿದ್ದು, ಮುಂಜಾನೆ ಮತ್ತು ರಾತ್ರಿಯ ವೇಳೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಶುಕ್ರವಾರ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ಹಾಗೂ ಒಣಹವೆ ಮುಂದುವರಿಯಲಿದೆ.

ರಾಜ್ಯದಲ್ಲಿ ಮುಂದುವರಿದ ಚಳಿಯ ಅಬ್ಬರ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 20, 2026 8:00 AM

ಬೆಂಗಳೂರು: ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಕನಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುತ್ತಿದ್ದು, ಮುಂಜಾನೆ ಮತ್ತು ರಾತ್ರಿಯ ವೇಳೆ ಚಳಿಯ ಪ್ರಮಾಣ (Karnataka Weather) ಹೆಚ್ಚಾಗಿದೆ. ಶುಕ್ರವಾರ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ಹಾಗೂ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಕರಾವಳಿಯಾದ್ಯಂತ ಶುಭ್ರ ಆಕಾಶ ಹಾಗೂ ಒಣಹವೆ ಇರಲಿದ್ದು, ಹಗಲಿನಲ್ಲಿ ಬಿಸಿಲಿನ ತಾಪಮಾನ ಸಾಮಾನ್ಯವಾಗಿರಲಿದೆ. ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆಕಾಶ ಶುಭ್ರವಾಗಿರುವುದರಿಂದ ರಾತ್ರಿ ಮತ್ತು ಮುಂಜಾನೆಯ ವೇಳೆ ತಾಪಮಾನ ಕುಸಿದು ಚಳಿಯ ತೀವ್ರತೆ ಹೆಚ್ಚಿರಲಿದೆ.

ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ತುಮಕೂರು ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಹಗಲಿನಲ್ಲಿ ಬಿಸಿಲು ಮತ್ತು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಇಲ್ಲ. ಮುಂಜಾನೆ ಕೆಲವೆಡೆ ಮಂಜು ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28°C ನಿಂದ 29°C ಹಾಗೂ ಕನಿಷ್ಠ ತಾಪಮಾನ 16°C ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ.

ASHA workers protest: ಕೊರೆಯುವ ಚಳಿಯಲ್ಲೂ ಮುಂದುವರಿದ ಆಶಾ ಕಾರ್ಯಕರ್ತೆಯರ ಧರಣಿ; ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಬಂಗಾಳಕೊಲ್ಲಿಯಲ್ಲಿನ ಹವಾಮಾನ ವೈಪರೀತ್ಯ ಹಾಗೂ ಶುಷ್ಕ ಗಾಳಿಯ ಪ್ರಭಾವದಿಂದಾಗಿ ರಾಜ್ಯದಲ್ಲಿ ತಾಪಮಾನ ಇಳಿಕೆಯಾಗಿದ್ದು, ಶನಿವಾರದವರೆಗೆ (ನವೆಂಬರ್ 21) ಇದೇ ರೀತಿಯ ತಂಪಾದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ರಾಜ್ಯದ ಯಾವುದೇ ಭಾಗಕ್ಕೆ ಸದ್ಯಕ್ಕೆ ಹವಾಮಾನ ಇಲಾಖೆಯಿಂದ ಯಾವುದೇ ಮಳೆ ಅಥವಾ ಗಾಳಿಯ ಎಚ್ಚರಿಕೆ ನೀಡಲಾಗಿಲ್ಲ