ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Janivara row: ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್‌ ರದ್ದು, 25 ಲಕ್ಷ ರೂ. ದಂಡ: ಸಿಎಂಗೆ ಪತ್ರ ಬರೆದು ಬ್ರಾಹ್ಮಣ ಮಹಾಸಭಾ ಒತ್ತಾಯ

ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್ ರಘುನಾಥ್ ತಿಳಿಸಿದ್ದಾರೆ.

ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್‌ ರದ್ದು, ದಂಡ: ಬ್ರಾಹ್ಮಣ ಸಭಾ ಆಗ್ರಹ

ಸಿಎಂಗೆ ಬ್ರಾಹ್ಮಣ ಮಹಾಸಭಾ ಪತ್ರ -

ಹರೀಶ್‌ ಕೇರ
ಹರೀಶ್‌ ಕೇರ Apr 25, 2026 1:37 PM

ಬೆಂಗಳೂರು, ಏ.25: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ (CET Exam) ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ (Janivara Row) ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (Brahmana mahasabha) ಮುಖ್ಯಮಂತ್ರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಜನಿವಾರ (Sacred thread) ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಲಾಗಿದೆ. ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಜನಿವಾರದ ಜಟಾಪಟಿ ತೀವ್ರವಾಗಿದ್ದು, ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ.

2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದೆ ಎಂಬುದಾಗಿ ಆರೋಪಿಸಲಾಗಿದೆ. ಈ ಘಟನೆ ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದು ಮಹಾಸಭಾ ಅಭಿಪ್ರಾಯಪಟ್ಟಿದೆ.

CET Exam: ಸಿಇಟಿ ಪರೀಕ್ಷೆ; ಚಿಕ್ಕಬಳ್ಳಾಪುರದಲ್ಲೂ ಜನಿವಾರ ತೆಗೆಸಿದ ಸಿಬ್ಬಂದಿ, 12 ದಿನದ ಹಿಂದೆ ಉಪನಯನವಾಗಿದ್ದ ವಿದ್ಯಾರ್ಥಿ

ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅಲ್ಲಿ ಸಹ ಹೋರಾಟ ನಡೆಯುತ್ತಿದೆ ಎಂದು ರಘುನಾಥ್ ತಿಳಿಸಿದ್ದಾರೆ. ಪ್ರಕರಣದ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲು ವಿಳಂಬವಾಗುತ್ತಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಘಟನೆಗೆ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಮಹಾಸಭಾ ಎಚ್ಚರಿಕೆ ನೀಡಿದೆ.