Jockey 42 Movie: ನಟ ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಗುಡ್‌ನ್ಯೂಸ್ ಕೊಟ್ಟ ನಿರ್ದೇಶಕ ಗುರುತೇಜ್ ಶೆಟ್ಟಿ
Jockey 42 Movie: ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದಯೋನ್ಮುಖ ನಟ ಕಿರಣ್ ರಾಜ್, ಕಾಂಬಿನೇಷನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಅದುವೇ ʼಜಾಕಿ 42ʼ ಮೂಲಕ. ‘ಜಾಕಿ 42’ ಚಿತ್ರಕ್ಕಾಗಿಯೇ ನಾಯಕ ನಟ ಕಿರಣ್ ರಾಜ್, ಥೈಲ್ಯಾಂಡ್‌ಗೆ ಹಾರ್ಸ್ ರೈಡಿಂಗ್ ಜಾಕಿ ಟ್ರೈನಿಂಗ್ ತೆಗೆದುಕೊಂಡು ಬಂದಿರುವುದು ವಿಶೇಷವಾಗಿದೆ.


ಬೆಂಗಳೂರು: ಸ್ಯಾಂಡಲ್‌ವುಡ್‌ನ ಭರವಸೆಯ ನಟ ಕಿರಣ್ ರಾಜ್ ಹುಟ್ಟುಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್. ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದಯೋನ್ಮುಖ ನಟ ಕಿರಣ್ ರಾಜ್ (Kiran Raj), ಕಾಂಬಿನೇಷನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಅದುವೇ ʼಜಾಕಿ 42ʼ (Jockey 42 Movie) ಮೂಲಕ. ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಬರುತ್ತಿರುವ ಭಾರತಿ ಸತ್ಯ ನಾರಾಯಣ ನಿರ್ಮಿಸುತ್ತಿರುವ ಮೊಟ್ಟ ಮೊದಲ ಚಿತ್ರ ʼಜಾಕಿ 42ʼ.
ಹಾರ್ಸ್ ರೇಸಿಂಗ್ ಕಥಾ ವಸ್ತುವನ್ನೇ ಮೂಲವಾಗಿಟ್ಟು, ಸಿನಿಮಾ ಮಾಡುತ್ತಿರುವ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಮೊದಲ ಸಿನಿಮಾ ಇದಾಗಲಿದೆ ಎಂದರು ಸಹ ತಪ್ಪಿಲ್ಲ. ಈಗಾಗಲೇ ಬೆಂಗಳೂರು ಸುತ್ತಮುತ್ತಲೂ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ‘ಜಾಕಿ 42’ ಚಿತ್ರಕ್ಕಾಗಿಯೇ ನಾಯಕ ನಟ ಕಿರಣ್ ರಾಜ್, ಥೈಲ್ಯಾಂಡ್‌ಗೆ ಹಾರ್ಸ್ ರೈಡಿಂಗ್ ಜಾಕಿ ಟ್ರೈನಿಂಗ್ ತೆಗೆದುಕೊಂಡು ಬಂದಿರುವುದು ವಿಶೇಷವಾಗಿದೆ. ಚಿತ್ರದಲ್ಲಿ ದೊಡ್ಡಮಟ್ಟದ ಕಲಾವಿದರ ದಂಡು ಇರಲಿದ್ದು, ಮುಂದಿನ ದಿನಗಳಲ್ಲಿ ಆದರ ಬಗ್ಗೆ ಮಾಹಿತಿ ಸಿಗಲಿದೆ ಎಂದು ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Monsoon Fashion 2025: ಮಾನ್ಸೂನ್‌ಗೆ ಬಂತು ಲೈಟ್ ವೇಟ್ ಯೂನಿಸೆಕ್ಸ್ ಜಾಕೆಟ್ಸ್
ಸಾಹಿತಿ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪʼ ಚಿತ್ರ ಜು.25ಕ್ಕೆ ರಿಲೀಸ್

ಬೆಂಗಳೂರು: ಮೈಸೂರಿನ ಬಾಬುನಾಯಕ್ ಅವರು ಮಲೈ ಮಹಾದೇಶ್ವರ ಎಂಟರ್‌ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ‘ಸ್ವಪ್ನಮಂಟಪʼ ಕನ್ನಡ ಚಿತ್ರವು (Swapna mantapa Movie) ಇದೇ ಜುಲೈ ತಿಂಗಳ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅನೇಕ ಸದಭಿರುಚಿ ಚಿತ್ರಗಳನ್ನು ಬಿಡುಗಡೆ ಮಾಡಿರುವ ಮಾರ್ಸ್ ಸುರೇಶ್ ಅವರು ತಮ್ಮ ಸಂಸ್ಥೆಯಿಂದ ‘ಸ್ವಪ್ನಮಂಟಪʼ ವನ್ನು ತೆರೆಗೆ ತರುತ್ತಿದ್ದಾರೆ.
ʼಸ್ವಪ್ನಮಂಟಪʼವು ಬರಗೂರು ರಾಮಚಂದ್ರಪ್ಪ ಅವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪʼ ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ಕಥಾ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವ ಮತ್ತು ಅನೇಕ ತಿರುವುಗಳನ್ನು ಒಳಗೊಂಡಿರುವ ಕಥಾವಸ್ತು ಈ ಚಿತ್ರದಲ್ಲಿದೆ.
ಈ ಚಿತ್ರವು ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ಬರಗೂರರೇ ತಮ್ಮ ಕಥಾವಸ್ತುವಿಗೆ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ನಾಯಕ-ನಾಯಕಿಯಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರದಲ್ಲಿ ಇರುವುದು ಒಂದು ವಿಶೇಷ. ಜತೆಗೆ ಸುಂದರರಾಜ್, ಶೋಭಾ ರಾಘವೇಂದ್ರ, ರಜನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಮೈಸೂರು ಮಂಜುಳ ಮುಂತಾದವರು ತಾರಾಗಣದಲ್ಲಿದ್ದಾರೆ.
ಈ ಸುದ್ದಿಯನ್ನೂ ಓದಿ | Jewel Fashion 2025: ಸೀಸನ್‌ನಲ್ಲಿ ಟ್ರೆಂಡಿಯಾದ ವೈವಿಧ್ಯಮಯ ಪರ್ಲ್ ನೆಕ್ಲೇಸ್‌ಗಳಿವು
ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ, ಹೊಸ್ಮನೆ ಮೂರ್ತಿ ಕಲಾವಿನ್ಯಾಸ, ನಟರಾಜ್‍ಶಿವು ಮತ್ತು ಪ್ರವೀಣ್, ಸಹ ನಿರ್ದೇಶನ ಈ ಚಿತ್ರಕ್ಕಿದೆ. ಸಹ ನಿರ್ಮಾಪಕರು ಎಚ್.ಪಿ. ಕವಿತಾ.