ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka High Court: ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

Karnataka High Court: ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು (Justice Vibhu Bakhru) ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಈ ಸಂಬಂಧ ಸಂವಿಧಾನದತ್ತ ಅಧಿಕಾರವನ್ನು ಬಳಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

Profile Prabhakara R Jul 14, 2025 9:54 PM

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ (Karnataka High Court) ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು (Justice Vibhu Bakhru) ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಈ ಸಂಬಂಧ ಸಂವಿಧಾನದತ್ತ ಅಧಿಕಾರವನ್ನು ಬಳಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ಮಾತ್ರವಲ್ಲದೇ ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಇದೇ ವೇಳೆ ನೇಮಿಸಲಾಗಿದೆ.

ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಸಚ್‌ದೇವ, ಜಾರ್ಖಂಡ್ ಹೈಕೋರ್ಟ್‌ಗೆ ತಾರ್‌ಲೋಕ್‌ ಸಿಂಗ್ ಚೌಹಾಣ್, ಗುವಾಹಟಿ ಹೈಕೋರ್ಟ್‌ಗೆ ಅಶುತೋಷ್ ಕುಮಾರ್, ಪಾಟ್ನಾ ಹೈಕೋರ್ಟ್‌ಗೆ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.

ನ್ಯಾ. ವಿಭು ಬಖ್ರು ಅವರ ಪರಿಚಯ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ನ್ಯಾ.ವಿಭು ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.

ನ್ಯಾ. ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂಗೊಂಡಿದ್ದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಕೊಲಿಜಿಯಂ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಈ ಮೇಲಿನ ಹೆಸರುಗಳನ್ನು ಶಿಫಾರಸುಗಳನ್ನು ಮಾಡಿತ್ತು.