ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಡಿ.ಕೆ.ಶಿವಕುಮಾರ್: ಅತಿಥಿ ಗೃಹಕ್ಕೆ ಹರಿದುಬಂದ ಜನಸಾಗರ

ಬೆಳಿಗ್ಗೆಯಿಂದಲೇ ಜಿಲ್ಲೆಯ ಮೂಲೆ ಮೂಲೆಗಳಿಂದ ಹಾಗೂ ಕಲ್ಯಾಣ ಕರ್ನಾಟಕದ ವಿವಿಧ ಭಾಗ ಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ಮತ್ತು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸರತಿಯಲ್ಲಿ ನಿಂತಿದ್ದರು. ಪ್ರತಿಯೊಬ್ಬರನ್ನೂ ಮುಖಾಮುಖಿಯಾಗಿ ಮಾತನಾಡಿಸಿದ ಮುಖ್ಯಮಂತ್ರಿಗಳು, ಅವರ ಕೈಯಿಂದಲೇ ಮನವಿ ಪತ್ರಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಸಮಾಧಾನ ದಿಂದ ಆಲಿಸಿದರು.

ರೈತರು, ಸಾರ್ವಜನಿಕರು, ಮುಖಂಡರಿಂದ ಮುಖಾಮುಖಿ ಭೇಟಿ

-

Profile
Ashok Nayak Jul 7, 2026 11:29 AM

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನವಾದ ಕಲಬುರಗಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Chief Minister D K Shivkumar) ಅವರು, ಮಂಗಳವಾರ ಬೆಳಿಗ್ಗೆ ನಗರದ ಸರಕಾರಿ ಅತಿಥಿ ಗೃಹದಲ್ಲಿ ಸಾರ್ವಜನಿಕರು ಹಾಗೂ ರೈತರಿಂದ ಖುದ್ದಾಗಿ ಅಹವಾಲುಗಳನ್ನು ಸ್ವೀಕರಿಸಿದರು.

ಮುಂಗಾರು ಮಳೆ ವಿಳಂಬದಿಂದ ತತ್ತರಿಸಿರುವ ಈ ಭಾಗದ ಜನರ ಕಷ್ಟ-ಸುಖಗಳನ್ನು ಆಲಿಸಲು ಮುಖ್ಯಮಂತ್ರಿಗಳು ನೇರವಾಗಿ ಸಾರ್ವಜನಿಕರ ಭೇಟಿಗೆ ಕಾಲಾವಕಾಶ ನೀಡಿದರು.

ಇದನ್ನೂ ಓದಿ: Kalaburagi Transport App: ಕೈಕೊಟ್ಟ ನಮ್ಮ ಕಲಬುರಗಿ ಸಾರಿಗೆ App

ಬೆಳಿಗ್ಗೆಯಿಂದಲೇ ಜಿಲ್ಲೆಯ ಮೂಲೆ ಮೂಲೆಗಳಿಂದ ಹಾಗೂ ಕಲ್ಯಾಣ ಕರ್ನಾಟಕದ ವಿವಿಧ ಭಾಗ ಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ಮತ್ತು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸರತಿಯಲ್ಲಿ ನಿಂತಿದ್ದರು. ಪ್ರತಿಯೊಬ್ಬರನ್ನೂ ಮುಖಾಮುಖಿಯಾಗಿ ಮಾತನಾಡಿಸಿದ ಮುಖ್ಯಮಂತ್ರಿಗಳು, ಅವರ ಕೈಯಿಂದಲೇ ಮನವಿ ಪತ್ರಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿದರು.

DKS to receive appeal

ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರೈತ ಸಂಘಟನೆಗಳು

ಈ ಸಂದರ್ಭದಲ್ಲಿ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಬ್ಬು ಬೆಳೆಗಾರರ ಸಂಘದ ಮುಖಂಡರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಪ್ರಸಕ್ತ ಸಾಲಿನಲ್ಲಿ ಮಳೆ ಅಭಾವದಿಂದ ಎದುರಾಗಿರುವ ಬೆಳೆಹಾನಿ, ನೀರಾವರಿ ಸಮಸ್ಯೆ ಹಾಗೂ ಕೃಷಿ ವಲಯದ ಕುಂದುಕೊರತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ತಮಗೆ ತುರ್ತು ಪರಿಹಾರ ಒದಗಿಸುವಂತೆ ಮನವಿ ಪತ್ರ ಸಲ್ಲಿಸಿದರು.

DKS to receive appeal 3

ಸಾರ್ವಜನಿಕರಿಂದ ಸಾಲು ಸಾಲು ಅರ್ಜಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಸಾರ್ವಜನಿಕರ ದೂರುಗಳನ್ನು ಆದಷ್ಟು ಬೇಗ ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.