ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Lokayukta Raid: ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಜೆಸ್ಕಾಂ ಎಇಇ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸ ಹಾಗೂ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸು ತ್ತಿದ್ದಾರೆ. ಇದರ ಜತೆಗೆ ಜೆಸ್ಕಾಂ ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಜೆಸ್ಕಾಂ ಎಇಇ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

-

Profile
Ashok Nayak Sep 22, 2026 8:57 AM

ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಎಇಇ) ರಾಜೇಶ್ವರಿ ಅವರ ಮನೆಗಳು ಹಾಗೂ ಕಚೇರಿ ಮೇಲೆ ಲೋಕಾಯುಕ್ತ(Lokayukta) ಅಧಿಕಾರಿಗಳು ಮಂಗಳವಾರ ಬೆಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

LOka Raid

ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸ ಹಾಗೂ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸು ತ್ತಿದ್ದಾರೆ. ಇದರ ಜತೆಗೆ ಜೆಸ್ಕಾಂ ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: Lokayukta News: ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಯ ರೆಕಾರ್ಡ್‌ ರೂಂ, ಎಡಿಎಲ್‌ಆರ್‌ ಕಚೇರಿಗೆ ಲೋಕಾಯುಕ್ತ ಲಗ್ಗೆ

ಒಂದೇ ಸಮಯದಲ್ಲಿ ಎರಡು ಮನೆಗಳು ಹಾಗೂ ಕಚೇರಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಆದಾಯದ ಮೂಲಗಳು, ಆಸ್ತಿ-ಪಾಸ್ತಿ, ಹಣಕಾಸು ವ್ಯವಹಾರಗಳು ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2026-09-22 at 08.51.11

ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಜೇಶ್ವರಿ ಅವರು ಮನೆಗೆ ಮರಳುವಷ್ಟರಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದೆ. ದಾಳಿ ಹಾಗೂ ಪರಿಶೀಲನೆ ಕುರಿತು ಹೆಚ್ಚಿನ ಮಾಹಿತಿ ಅಧಿಕಾರಿಗಳ ತನಿಖೆಯ ಬಳಿಕ ಲಭ್ಯವಾಗಬೇಕಿದೆ.