ಕಸ ಎಸೆಯಬೇಡಿ ಎಂದಿದ್ದಕ್ಕೆ ಮುಖ್ಯ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ; ನಗದು ದೋಚಿ ದುಷ್ಕರ್ಮಿಗಳು ಪರಾರಿ
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಗಳ ಗ್ಯಾಂಗ್ ಬರ್ತ್‌ಡೇ ಪಾರ್ಟಿ ಮುಗಿಸಿ, ಶಿಕ್ಷಕರ ಮನೆಯ ಬಳಿ ಕಸ ಎಸೆಯಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರ ಮಗ, ಇಲ್ಲಿ ಕಸ ಎಸೆಯಬೇಡಿ ಎಂದು ಆಕ್ಷೇಪಿಸಿದ್ದಕ್ಕೆ ಶಿಕ್ಷಕ ಹಾಗೂ ಅವರ ಮಗನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ.
ಹಲ್ಲೆಗೊಳಗಾದ ಮುಖ್ಯ ಶಿಕ್ಷಕ ಲಕ್ಷ್ಮಣ ಜೋಗುರ್ ಮತ್ತು ಪುತ್ರ -
ಅಫಜಲಪುರ: ಕಸ ಎಸೆಯದಂತೆ ತಡೆದಿದ್ದಕ್ಕೆ ಮುಖ್ಯ ಶಿಕ್ಷಕರೊಬ್ಬರ ಮೇಲೆ ದುಷ್ಕರ್ಮಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿ, ಹಣ ದೋಚಿರುವ ಘಟನೆ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ನಡೆದಿದೆ. ಚೌಡಾಪುರದ ಮುಖ್ಯ ಶಿಕ್ಷಕ ಲಕ್ಷ್ಮಣ ಜೋಗುರ್ ಹಲ್ಲೆಗೊಳಗಾದವರು. ಆರೋಪಿಗಳಾದ ಉಮೇಶ್ ಭೋವಿ, ವಿಕಾಸ್ ಹಾಗೂ ಅವರ ಗ್ಯಾಂಗ್ ಬರ್ತ್‌ಡೇ ಪಾರ್ಟಿ ಮುಗಿಸಿ, ಶಿಕ್ಷಕರ ಮನೆಯ ಬಳಿ ಕಸ ಎಸೆಯಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರ ಮಗ "ಇಲ್ಲಿ ಕಸ ಎಸೆಯಬೇಡಿ ಎಂದು ಆಕ್ಷೇಪಿಸಿದ್ದಕ್ಕೆ ಸಂಚು ರೂಪಿಸಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಶಿಕ್ಷಕ ಹಾಗೂ ಅವರ ಮಗನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಯ ನಂತರ ಆರೋಪಿಗಳು ಜೀವ ಬೆದರಿಕೆ ಹಾಕಿ 20 ಸಾವಿರ ರೂ. ನಗದನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ಗುರುಮಠಕಲ್, ಮಾ.31: ತಂದೆಯ ಅಕಾಲಿಕ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿಯೊಬ್ಬಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಮನಮಿಡಿಯುವ ಘಟನೆ ಪಟ್ಟಣದ ಕಟ್ಟಲ್ ಗೇರಾ ಓಣಿಯಲ್ಲಿ ಮಂಗಳವಾರ ನಡೆದಿದೆ. ಯಾದಗಿರಿ ಜಿಲ್ಲೆ (Yadgir News) ಗುರುಮಠಕಲ್ ಕಟಲಗೇರಾ ಬಡಾವಣೆಯ ಕೂಲಿ ಕಾರ್ಮಿಕ ಅಂಜಪ್ಪ ಅನಾರೋಗ್ಯದಿಂದ ಸೋಮವಾರ ಮೃತಪಟ್ಟಿದ್ದರು. ತಂದೆಯ ಸಾವಿನಿಂದ ಕಂಗಾಲಾಗಿದ್ದ ವಿದ್ಯಾರ್ಥಿನಿ ಅನುಸುಜಾ, ಆ ನೋವಿನಲ್ಲೇ ಹಿಂದಿ ವಿಷಯದ ಪರೀಕ್ಷೆ ಬರೆದು, ಮಧ್ಯಾಹ್ನದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾಳೆ.
ಗುರುಮಠಕಲ್ ಪಟ್ಟಣದ ಉಪ್ಪಾರ ಗಡ್ಡ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಅನುಸುಜಾ, ಜಿ. ಶ್ರೀನಿವಾಸ್ ರೆಡ್ಡಿ ಸ್ಮಾರಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ (ಫ್ರಂಟ್ ಲೈನ್ ಶಾಲೆ) ಪರೀಕ್ಷಾ ಕೇಂದ್ರದಲ್ಲಿ ಈಗಾಗಲೇ ನಾಲ್ಕು ವಿಷಯಗಳ ಪರೀಕ್ಷೆಯನ್ನು ಬರೆದಿದ್ದು. ಕೊನೆಯ ಎರಡು ವಿಷಯದ ಪರೀಕ್ಷೆಯನ್ನು ಬರೆಯುವ ಸಿದ್ಧತೆಯಲ್ಲಿದ್ದಳು. ಈ ನಡುವೆ ವಿದ್ಯಾರ್ಥಿನಿಗೆ ತಂದೆಯ ಸಾವು ತೀವ್ರ ಆಘಾತ ಉಂಟು ಮಾಡಿದೆ.
Bidar Rain: ಬೀದರ್‌ನಲ್ಲಿ ಮಳೆ ಅಬ್ಬರ; ಸಿಡಿಲು ಬಡಿದು ಯುವರೈತ ಸಾವು
ವಿಷಯ ತಿಳಿದ ಶಾಲಾ ಶಿಕ್ಷಕರು, ಶಾಲೆಯ ಎಸ್‌ಡಿಎಂಸಿ ಸದಸ್ಯರು, ಸ್ಥಳೀಯ ಪುರಸಭೆಯ ಮಾಜಿ ಸದಸ್ಯ ಆಶಣ್ಣ ಬುದ್ಧ ಬೆಳಗ್ಗೆ ವಿದ್ಯಾರ್ಥಿನಿಯ ಮನೆಗೆ ತೆರಳಿ, ಸಾಂತ್ವನ ಹೇಳಿ, ಪರೀಕ್ಷೆ ಬರೆಯಲು ಆತ್ಮಸ್ಥೈರ್ಯ ತುಂಬಿದ್ದರು.