Self Harming: ಜನ್ಮದಿನದಂದೇ ನೇಣಿಗೆ ಶರಣಾದ ಕಲಬುರಗಿ ಕೇಂದ್ರೀಯ ವಿವಿ ವಿದ್ಯಾರ್ಥಿನಿ
Kalaburagi News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಕಲಬುರಗಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ (Self Harming) ಬುಧವಾರ ಮಧ್ಯಾಹ್ನ ನಡೆದಿದೆ. ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ಜಯಶ್ರೀ (21) ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಒಡಿಶಾ ಮೂಲದ ವಿದ್ಯಾರ್ಥಿನಿ ಜಯಶ್ರೀ ಆತ್ಮಾಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರೀಶಿಲನೆ ನಡೆಸಿದ್ದಾರೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಳ್ಳಾರಿಯಲ್ಲಿ ಕಸದ ವಾಹನ ಹರಿದು 3 ವರ್ಷದ ಬಾಲಕ ಸಾವು
ಬಳ್ಳಾರಿ: ಮಹಾನಗರ ಪಾಲಿಕೆಯ ಕಸ ಸಂಗ್ರಹಣೆ ವಾಹನ ಹರಿದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬಳ್ಳಾರಿಯ (Bellary News) ಬಾಪೂಜಿ ನಗರದಲ್ಲಿ ನಡೆದಿದೆ. ನಗರದ ಶೈಲಜಾ- ಸಮರ ದಂಪತಿ ಪುತ್ರ ವಿಕ್ಕಿ (3) ಮೃತ ಬಾಲಕ. ಬೆಳಗ್ಗೆ ಬಾಪೂಜಿ ನಗರದಲ್ಲಿ ಕಸ ಸಂಗ್ರಹಿಸಲು ವಾಹನ ಬಂದಿತ್ತು. ಈ ವೇಳೆ, ರಸ್ತೆ ಬದಿ ಆಟ ಆಡುತ್ತಿದ್ದ ವಿಕ್ಕಿ ತಲೆ ಮೇಲೆ ವಾಹನ ಹರಿದಿದೆ. ಕೂಡಲೇ ಗಾಯಳು ಮಗುವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆಸ್ಪತ್ರೆ ಮುಟ್ಟುವುದರಲ್ಲೇ ಮಗು ಕೊನೆ ಉಸಿರೆಳೆದಿದೆ.
ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದಂದ ಮಗು ಬಲಿಯಾಗಿದೆ ಎಂದು ಆರೋಪಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Murder Case: ಮೊಮ್ಮಗಳ ಹುಟ್ಟುಹಬ್ಬದ ಪಾರ್ಟಿಯಲ್ಲಿ ಹೆಂಡತಿಯನ್ನೇ ಕೊಂದ ವ್ಯಕ್ತಿ