ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalaburagi News: ಶ್ರೀ ಡಾ. ಶರಣಬಸಪ್ಪ ಅಪ್ಪ ಆರೋಗ್ಯ ಸ್ಥಿರ, ವದಂತಿಗೆ ಕಿವಿಗೊಡದಂತೆ ಮನವಿ

Kalaburagi News: ಉಸಿರಾಟದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಡಾ. ಅಪ್ಪಾಜಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವು ಅವರ ಒಟ್ಟಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಉಸಿರಾಟದ ಸೋಂಕು ನಿಯಂತ್ರಣದಲ್ಲಿದೆ ಎಂದು ಹೇಳಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಡಾ. ಶರಣಬಸಪ್ಪ ಅಪ್ಪ ಆರೋಗ್ಯ ಸ್ಥಿರ, ವದಂತಿಗೆ ಕಿವಿಗೊಡದಂತೆ ಮನವಿ

Profile Siddalinga Swamy Jul 26, 2025 5:22 PM

ಕಲಬುರಗಿ: ಇಲ್ಲಿನ ಶ್ರೀ ಶರಣಬಸವೇಶ್ವರ ಸಂಸ್ಥಾನದ ಎಂಟನೇ ಪೀಠಾಧಿಪತಿ, ಮಹಾದಾಸೋಹಿ ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿ ಶುಕ್ರವಾರ ತಡರಾತ್ರಿ ಆಸ್ಪತ್ರೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿ ವಾಂತಿ ಹಾಗೂ ನಿಶ್ಯಕ್ತಿ ಆದ ಹಿನ್ನಲೆ ಕಲಬುರಗಿ (Kalaburagi News) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅಪ್ಪಾಜಿ ಆರೋಗ್ಯ ಸ್ಥಿರವಾಗಿದೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀ ಶರಣಬಸವೇಶ್ವರ ಸಂಸ್ಥಾನದ ದಾಸೋಹ ಮಹಾಮನೆ ಪ್ರಕಟಣೆ ಹೊರಡಿಸಿದೆ.

ಉಸಿರಾಟದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಶೀಘ್ರವಾಗಿ ಸಾಮಾನ್ಯ ಸ್ಥಿತಿಗೆ ಚೇತರಿಸಿಕೊಳ್ಳುತ್ತಿದ್ದಾರೆ. ಡಾ. ಅಪ್ಪಾಜಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವು ಅವರ ಒಟ್ಟಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಉಸಿರಾಟದ ಸೋಂಕು ನಿಯಂತ್ರಣದಲ್ಲಿದೆ ಎಂದು ಹೇಳಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ತಿಳಿಸಿದ್ದಾರೆ.

ವದಂತಿಗೆ ಕಿವಿಗೊಡದಂತೆ ಮನವಿ

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಪೂಜ್ಯ ಡಾ. ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದರಿಂದ ಶರಣಬಸವೇಶ್ವರ ಸಂಸ್ಥಾನದ ಭಕ್ತರು ಭಯಭೀತರಾಗಬಾರದು ಮತ್ತು ಡಾ. ಅಪ್ಪಾಜಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹರಡಿರುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | BOB Recruitment 2025: 2,500 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿದ ಬ್ಯಾಂಕ್‌ ಆಫ್‌ ಬರೋಡಾ; ಹೊಸ ಅಪ್‌ಡೇಟ್‌ ಬಗ್ಗೆ ಇಲ್ಲಿದೆ ಮಾಹಿತಿ