Bandh: ಬೆಳೆ ವಿಮೆ ತಾರತಮ್ಯ ಖಂಡಿಸಿ ಕಾಳಗಿ ಸಂಪೂರ್ಣ ಬಂದ್: ರೈತರ ಹೋರಾಟಕ್ಕೆ ವ್ಯಾಪಾರಸ್ಥರು, ಸಾರ್ವಜನಿಕರ ಬೆಂಬಲ; ನ್ಯಾಯಯುತ ಪರಿಹಾರಕ್ಕೆ ಆಗ್ರಹ
ಬೆಳೆ ವಿಮೆ ಪಾವತಿಯಲ್ಲಿ ಅರ್ಹ ರೈತರಿಗೆ ಅನ್ಯಾಯವಾಗಿದ್ದು, ವಿಮೆ ಪಾವತಿಗೆ ಸಂಬಂಧಿಸಿದ ತಾರತಮ್ಯವನ್ನು ಸರಿಪಡಿಸಿ ನಷ್ಟಕ್ಕೊಳಗಾದ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಕೈಜೋಡಿಸಿದರು
-
ಕಾಳಗಿ: 2025-26ನೇ ಸಾಲಿನ ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ತಾರತಮ್ಯ ಖಂಡಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಪಟ್ಟಣದ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಕಾಳಗಿ ಪಟ್ಟಣ ಸಂಪೂರ್ಣ ಬಂದ್ ಆಗಿ ಸ್ತಬ್ಧಗೊಂಡಿತು.
ಬೆಳೆ ವಿಮೆ ಪಾವತಿಯಲ್ಲಿ ಅರ್ಹ ರೈತರಿಗೆ ಅನ್ಯಾಯವಾಗಿದ್ದು, ವಿಮೆ ಪಾವತಿಗೆ ಸಂಬಂಧಿಸಿದ ತಾರತಮ್ಯವನ್ನು ಸರಿಪಡಿಸಿ ನಷ್ಟಕ್ಕೊಳಗಾದ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಕೈಜೋಡಿಸಿದರು.
ಇದನ್ನೂ ಓದಿ: Kalaburagi News: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕರು, ಮುಖಂಡರ ಬಂಧನ
ಬೆಳಗ್ಗೆಯಿಂದಲೇ ಪಟ್ಟಣದ ಪ್ರಮುಖ ಮಾರುಕಟ್ಟೆ, ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಜನಸಂಚಾರವೂ ವಿರಳವಾಗಿತ್ತು. ಇದರಿಂದ ಕಾಳಗಿ ಪಟ್ಟಣ ಬಹುತೇಕ ಬಿಕೋ ಎನ್ನುತ್ತಿತ್ತು.
ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ರೈತರು ಸ್ವಯಂಪ್ರೇರಿತವಾಗಿ ಕಾಳಗಿಗೆ ಆಗಮಿಸಿ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಕಾಲ್ನಡಿಗೆ ಮೂಲಕ ತೆರಳಿ, ಕಾಳಗಿ–ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ರೈತರು ಬೆಳೆ ವಿಮೆ ತಾರತಮ್ಯದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರು ಮಾತನಾಡಿ, ಬೆಳೆ ವಿಮೆ ಯೋಜನೆಗೆ ನಿಯಮಾನುಸಾರ ಪ್ರೀಮಿಯಂ ಪಾವತಿಸಿದ್ದರೂ ಹಲವು ಅರ್ಹ ರೈತರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಒಂದೇ ಪ್ರದೇಶದಲ್ಲಿ ಬೆಳೆ ಬೆಳೆದ ರೈತರಲ್ಲಿ ಕೆಲವರಿಗೆ ವಿಮೆ ಪರಿಹಾರ ದೊರೆತರೆ, ಇನ್ನು ಕೆಲವರಿಗೆ ಪರಿಹಾರ ದೊರೆಯದಿರುವುದು ತಾರತಮ್ಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.
![]()
“ರೈತರ ಸಮಸ್ಯೆ ಪರಿಹರಿಸುವುದು ಅಧಿಕಾರಿಗಳ ಜವಾಬ್ದಾರಿ” “ಕಾಳಗಿ ಪಟ್ಟಣದ ಜನರು ರೈತರ ಮೇಲೆ ತೋರಿಸುತ್ತಿರುವ ಪ್ರೀತಿ, ವಿಶ್ವಾಸ ಹಾಗೂ ಬೆಂಬಲ ದಿಂದಾಗಿ ಇಂದು ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ತಾಲೂಕಿನ ವಿವಿಧ ಗ್ರಾಮಗಳಿಂದ ಸ್ವಯಂಪ್ರೇರಿತವಾಗಿ ಆಗಮಿಸಿರುವ ರೈತರಿಗೆ ನ್ಯಾಯ ದೊರಕಿಸಿಕೊಡುವುದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಬೆಳೆ ವಿಮೆ ತಾರತಮ್ಯವನ್ನು ಕೂಡಲೇ ಪರಿಶೀಲಿಸಿ, ಅರ್ಹ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಬೇಕು. ರೈತರ ಸಮಸ್ಯೆ ಬಗೆಹರಿಯುವವರೆಗೆ ಹೋರಾಟಕ್ಕೆ ಬೆಂಬಲ ಮುಂದುವರಿಸಲಾಗುವುದು.
— ನೀಲಕಂಠ ಇಟಗಿ ಡೊಣ್ಣೂರ, ಹಿರಿಯ ರೈತ