ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೋಲಿ, ಕಬ್ಬಲಿಗ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡಿಸಲು ಆಗ್ರಹ; ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ

Kalaburagi News: ಕೋಲಿ, ಕಬ್ಬಲಿಗ ಸಮುದಾಯದವರು ತಮ್ಮನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದ ಜಗತ್ ವೃತ್ತದ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಲಿ, ಕಬ್ಬಲಿಗರನ್ನು ಎಸ್‌ಟಿ ಪಟ್ಟಿಗೆ ಸೇರಿಸಿ; ಕಲಬುರಗಿಯಲ್ಲಿ ಪ್ರತಿಭಟನೆ

ಕಲಬುರಗಿಯಲ್ಲಿ ಕೋಲಿ, ಕಬ್ಬಲಿಗರ ಬೃಹತ್ ಪ್ರತಿಭಟನೆ. -

Profile
Siddalinga Swamy Dec 29, 2025 3:36 PM

ಕಲಬುರಗಿ, ಡಿ.29: ಕೋಲಿ, ಕಬ್ಬಲಿಗ ಸಮುದಾಯದವರು ತಮ್ಮನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ (Kalaburagi News) ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಜಗತ್ ವೃತ್ತದ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹಾಗೂ ಬಾರ್ಕಿ ಎಂಬ ಪರ್ಯಾಯ ಪದಗಳನ್ನು ಒಳಗೊಂಡಂತೆ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಸಮುದಾಯದ ಮುಖಂಡರು, ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹಾಗೂ ಆದಿವಾಸಿ ಜನಾಂಗದವರು ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಎಸ್‌ಟಿ ಮೀಸಲಾತಿ ಅನಿವಾರ್ಯವಾಗಿದ್ದು, ಇದರಿಂದ ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರತಿನಿಧಿತ್ವಕ್ಕೆ ಅವಕಾಶ ಸಿಗಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಈ ಹಿಂದೆ ಐದು ಬಾರಿ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ಕೇಂದ್ರ ಸರ್ಕಾರ ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿ ಅದನ್ನು ವಾಪಸ್ ಕಳುಹಿಸಿದೆ ಎಂದು ಅವರು ಆರೋಪಿಸಿದರು. ಅದರಲ್ಲೂ ಕಳೆದ ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸದೆ ವಿಳಂಬ ಮಾಡುತ್ತಿರುವುದು ಸಮುದಾಯದ ಮೇಲೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ತಕ್ಷಣವೇ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ನಮ್ಮ ನ್ಯಾಯಸಮ್ಮತ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ. ಸರ್ಕಾರಗಳ ನಿರ್ಲಕ್ಷ್ಯ ಮುಂದುವರಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.‌

ಜನರ ಸಹಕಾರದಿಂದ ಆಳಂದ ಸೌಂದರ್ಯೀಕರಣಕ್ಕೆ ಹೊಸ ಮೆರುಗು: ಎಸಿ ಸಾಹಿತ್ಯ ಆಲದಕಟ್ಟಿ

ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಗತ್ ವೃತ್ತದ ಸುತ್ತಮುತ್ತ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.