ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Kalaburagi Breaking: ಕಲಬುರಗಿ ಜೈಲಿನಿಂದ ಮೂವರು ಕೈದಿಗಳು ಪರಾರಿ: ಗೃಹ ಸಚಿವರ ತವರಿನಲ್ಲೇ ಭದ್ರತಾ ವೈಫಲ್ಯ?

ನಗರದ ಹೊರವಲಯದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಜೈಲಿನಲ್ಲಿ ಬಿಗಿ ಭದ್ರತೆಯಿದ್ದರೂ, ಕೈದಿಗಳು ಎಸ್ಕೇಪ್ ಆಗಿರುವುದು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ತಂದಿಟ್ಟಿದೆ. ಸ್ವತಃ ಗೃಹ ಸಚಿವರ ತವರಿನಲ್ಲೇ ಇಂತಹ ದೊಡ್ಡ ಲೋಪ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮೂವರು ಕೈದಿಗಳು ಪರಾರಿ: ಗೃಹ ಸಚಿವರ ತವರಿನಲ್ಲೇ ಭದ್ರತಾ ವೈಫಲ್ಯ?

-

Profile
Ashok Nayak Jul 14, 2026 10:19 AM

ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರ ತವರು ಜಿಲ್ಲೆಯಾದ ಕಲಬುರಗಿಯ ಕೇಂದ್ರ ಕಾರಾಗೃಹದಿಂದ (ಸೆಂಟ್ರಲ್ ಜೈಲು) ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಇದು ಜೈಲಿನ ಭದ್ರತಾ ವ್ಯವಸ್ಥೆಯ ಗಂಭೀರ ಲೋಪವನ್ನು ಎತ್ತಿ ತೋರಿಸಿದೆ.

ಮಂಗಳವಾರ ನಸುಕಿನ ಜಾವ 3 ಗಂಟೆಯ ಸುಮಾರಿಗೆ ಮಸ್ತಾನ್, ಸಂತೋಷ್ ಮತ್ತು ಸಾಗರ್ ಎಂಬ ಕೈದಿಗಳು ಅತ್ಯಂತ ಯೋಜಿತ ರೀತಿಯಲ್ಲಿ ಜೈಲಿನ ಎತ್ತರದ ಕಾಂಪೌಂಡ್ ಗೋಡೆ ಹಾರಿ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: Kalaburagi News: ಕರ್ತವ್ಯದ ವೇಳೆಯೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ!

ನಗರದ ಹೊರವಲಯದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಜೈಲಿನಲ್ಲಿ ಬಿಗಿ ಭದ್ರತೆಯಿದ್ದರೂ, ಕೈದಿಗಳು ಎಸ್ಕೇಪ್ ಆಗಿರುವುದು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ತಂದಿಟ್ಟಿದೆ. ಸ್ವತಃ ಗೃಹ ಸಚಿವರ ತವರಿನಲ್ಲೇ ಇಂತಹ ದೊಡ್ಡ ಲೋಪ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

kalaburagi jail

ಫರಹತ್ತಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಜೈಲು ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿ ಗಳನ್ನು ಜಾಲಾಡುತ್ತಿದ್ದಾರೆ. ಕೈದಿಗಳಿಗೆ ಯಾರಾದರೂ ಒಳಗೆ ನೆರವು ನೀಡಿದ್ದಾರೆಯೇ ಎಂಬ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ತಪ್ಪಿಸಿಕೊಂಡವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಭದ್ರತೆಯಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಾಧ್ಯತೆಯಿದೆ.