Kamalashree passes away: ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ಇನ್ನಿಲ್ಲ
ಗಟ್ಟಿಮೇಳ ಧಾರಾವಾಹಿಯ ವೇದಾಂತ್ ಅಜ್ಜಿ ಪಾತ್ರ ಮಾಡಿದ್ದ ನಟಿ ಕಮಲಶ್ರೀ ಅವರಿಗೆ ವಯಸ್ಸು 70 ಆಗುತ್ತಿದ್ದಂತೆ ಸ್ತನ ಕ್ಯಾನ್ಸರ್ ಆಗಿತ್ತು. ಕೊನೆಗೂ ಅವರು ಈ ರೋಗದ ವಿರುದ್ಧ ಹೋರಾಡಲಾಗದೆ ಸೆಪ್ಟೆಂಬರ್ 30ರಂದು ನಿಧನರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಅಕ್ಟೋಬರ್ 1ರಂದು ಅಂತ್ಯಕ್ರಿಯೆ ನಡೆಯಲಿದೆ.

-

ಬೆಂಗಳೂರು: ಗಟ್ಟಿಮೇಳ (Gatti mela serial) ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಅವರು ನಿಧನರಾಗಿದ್ದಾರೆ. ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಮಲಶ್ರೀ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಮಲಶ್ರೀ ಅವರು ಗಟ್ಟಿಮೇಳ ಸೇರಿದಂತೆ ಹಲವಾರು ಹಿಟ್ ಸೀರಿಯಲ್‌ಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯ ಮಾಡಿದ್ದರು. ನಾಡಿನಾದ್ಯಂತ ಸಾಕಷ್ಟು ಮೆಚ್ಚುಗೆ ಹಾಗೂ ಅಭಿಮಾನಿಗಳನ್ನು ಪಡೆದಿದ್ದರು.
ಗಟ್ಟಿಮೇಳ ಧಾರಾವಾಹಿಯ ವೇದಾಂತ್ ಅಜ್ಜಿ ಪಾತ್ರ ಮಾಡಿದ್ದ ನಟಿ ಕಮಲಶ್ರೀ ಅವರಿಗೆ ವಯಸ್ಸು 70 ಆಗುತ್ತಿದ್ದಂತೆ ಸ್ತನ ಕ್ಯಾನ್ಸರ್ ಆಗಿತ್ತು. ಕೊನೆಗೂ ಅವರು ಈ ರೋಗದ ವಿರುದ್ಧ ಹೋರಾಡಲಾಗದೆ ಸೆಪ್ಟೆಂಬರ್ 30ರಂದು ನಿಧನರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಅಕ್ಟೋಬರ್ 1ರಂದು ಅಂತ್ಯಕ್ರಿಯೆ ನಡೆಯಲಿದೆ. ಕಮಲಶ್ರೀ ಅವರಿಗೆ ಗಂಡ, ಮಕ್ಕಳು ಕೂಡ ಇಲ್ಲ. ಅನಾರೋಗ್ಯದ ಕಾರಣಕ್ಕೆ ದುಡಿಯಲು ಆಗದೆ, ಕೊನೆಯ ದಿನಗಳಲ್ಲಿ ಆರ್ಥಿಕವಾಗಿ ಅವರು ಕಷ್ಟಪಟ್ಟಿದ್ದರು.
ಕಾವೇರಿ ಕನ್ನಡ ಮೀಡಿಯಂ, ಗಟ್ಟಿಮೇಳ, ಪತ್ತೆದಾರಿ ಪ್ರತಿಭಾ ಹೀಗೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ಡಾ ರಾಜ್‌ಕುಮಾರ್ ಬ್ಯಾನರ್‌ನಲ್ಲಿಯೂ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ, ನಾಟಕದಲ್ಲಿಯೂ ಅಭಿನಯಿಸಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ಒಂದು ಚಾನೆಲ್‌ನಲ್ಲಿ ಮಾತನಾಡಿದ್ದ ಕಮಲಶ್ರೀ ಅವರು, “ನನಗೆ ಕ್ಯಾನ್ಸರ್ ಆಗಿದೆ, ನನಗೆ ಸರ್ಜರಿ ಮಾಡೋದಕ್ಕೂ ಆಗಲ್ವಂತೆ, ವಯಸ್ಸಾಗಿದೆ, ಆಮೇಲೆ ಕಿಮೋಥೆರಪಿ ಕೊಟ್ಟರೆ ನಾನು ತಡ್ಕೊಳಲ್ವಂತೆ. ಅದಕ್ಕೆ ಸ್ವಲ್ಪ ದುಬಾರಿ ಮಾತ್ರೆಗಳೆಲ್ಲ ಬರೆದು ಕೊಡ್ತಾರೆ, ತಗೊಳ್ತಾ ಇದೀನಿ. ಆ ಮಾತ್ರೆಯಿಂದ ನನಗೆ ಸ್ವಲ್ಪ 60% ಪರವಾಗಿಲ್ಲ ಅಂತ ಡಾಕ್ಟರ್ ಹೇಳಿದ್ದಾರೆ. ಗಟ್ಟಿಮೇಳ ಧಾರಾವಾಹಿ ಕಲಾವಿದರು ನನಗೆ ತುಂಬ ಸಹಾಯ ಮಾಡಿದ್ದಾರೆ. ಗಿರಿಜಾ ಲೋಕೇಶ್, ಉಮಾಶ್ರೀ, ಗಟ್ಟಿಮೇಳ ಧಾರಾವಾಹಿ ಅಶ್ವಿನಿ ಹೀಗೆ ಸಾಕಷ್ಟು ಜನರು ಧನಸಹಾಯ ಮಾಡಿದ್ದಾರೆ. ಬೇರೆಯವರಿಗೆ ಕಷ್ಟ ಕೊಡೋಕೆ ನನಗೆ ಇಷ್ಟವಿಲ್ಲ. ಒಳ್ಳೆಯ ಧಾರಾವಾಹಿ ಅವಕಾಶ ಸಿಗುವಾಗಲೇ, ನನಗೆ ದೇವರು ಏನಾದರೊಂದು ಕಷ್ಟ ಕೊಡುತ್ತಾನೆ, ಅದೇ ಬೇಸರ” ಎಂದು ಹೇಳಿದ್ದರು.
ಇದನ್ನೂ ಓದಿ: SL Bhyrappa: ಭೈರಪ್ಪ ನಿಧನ ಸಾಹಿತ್ಯಲೋಕಕಷ್ಟೇ ಅಲ್ಲ ಚಿತ್ರರಂಗಕ್ಕೂ ತುಂಬಲಾರದ ನಷ್ಟ; ತಾರಾ ಅನುರಾಧಾ