Booker Prize 2025: ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ; ಸಿಎಂ ಸಿದ್ದರಾಮಯ್ಯ ಅಭಿನಂದನೆ
Booker Prize 2025: ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ನುಡಿದಿದ್ದಾರೆ.


ಬೆಂಗಳೂರು: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ (booker prize 2025) ಪುರಸ್ಕೃತರಾಗಿರುವ ಕನ್ನಡದ ಸಾಹಿತಿ ಬಾನು ಮುಷ್ತಾಕ್ (Banu mushtaq) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಹಲವಾರು ಗಣ್ಯರು, ಹಿರಿಯ ಸಾಹಿತಿಗಳು ಅಭಿನಂದಿಸಿದ್ದಾರೆ. ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ 'ಹೃದಯ ದೀಪ'ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ನುಡಿದಿದ್ದಾರೆ.
ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು.
— Siddaramaiah (@siddaramaiah) May 21, 2025
ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು… pic.twitter.com/ZGitjeuDm5
"2025ರ ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು. ಅನುವಾದಕಿ ದೀಪಾ ಭಸ್ತಿ ಇತಿಹಾಸ ನಿರ್ಮಿಸಿದ್ದಾರೆ" ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಫೇಸ್‌ಬುಕ್‌ನಲ್ಲಿ ಅಭಿನಂದಿಸಿದ್ದಾರೆ.
ಇದೇ ಮೊದಲ ಬಾರಿಗೆ ಕನ್ನಡತಿಯೊಬ್ಬರಿಗೆ ಈ ಪ್ರಶಸ್ತಿ ದೊರೆಯುತ್ತಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ʼಹಾರ್ಟ್ ಲ್ಯಾಂಪ್ʼ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ದೀಪಾ ಭಸ್ತಿ ಈ ಕತೆಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ಧಾರೆ. ಈ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿ 57.48 ಲಕ್ಷ ರೂ. ನಗದನ್ನು ಒಳಗೊಂಡಿದೆ. ಮೇ 21ರಂದು ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಜೇತರಿಗೆ 50,000 ಪೌಂಡ್ ಬಹುಮಾನ ಅಂದರೆ, 57.48 ಲಕ್ಷ ರೂ. ಸಿಗಲಿದೆ. ಇದನ್ನು ಲೇಖಕರು ಹಾಗೂ ಅನುವಾದಕರ ನಡುವೆ ಹಂಚಲಾಗುತ್ತದೆ.
ಇದನ್ನೂ ಓದಿ: Booker Prize 2025: ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ