ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026 LIVE: ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ; ಇಂದಿನ ಬಜೆಟ್‌ನ ಮುಖ್ಯಾಂಶಗಳು ಇಲ್ಲಿವೆ

Karnataka Budget 2026 LIVE News in Kannada: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ಇವತ್ತು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರ ದಾಖಲೆಯ 17ನೇ ಆಯವ್ಯಯ ಮಂಡನೆಯಾಗಿದೆ.

56 ಸಾವಿರ ಉದ್ಯೋಗ ಭರ್ತಿಗೆ ಚಾಲನೆ ಎಂದ ಸಿಎಂ

Karnataka Budget 2026 LIVE News in Kannada -

Vishakha Bhat Heggar
Vishakha Bhat Heggar Mar 6, 2026 7:12 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ (Karnataka Budget 2026 LIVE) ಆಯವ್ಯಯವನ್ನು ಮಂಡನೆ ಮಾಡುತ್ತಿದ್ದಾರೆ. ಹಿಂದಿನ ಬಜೆಟ್​​ಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಿದ್ದು, ಈ ಬಾರಿಯೂ ಅಭಿವೃದ್ದಿಯ ಕುರಿತು ಹಲವು ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ. ಕಳೆದ ಸಾಲಿನ ಬಜೆಟ್ 4.09 ಲಕ್ಷ ಕೋಟಿ ಗಾತ್ರ ಹೊಂದಿತ್ತು. ಈ ಬಾರಿ ಬಜೆಟ್​ ಗಾತ್ರ 4.50 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಗತಿಯಲ್ಲಿರುವ ಬೃಹತ್ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ವಿಶೇಷ ಅನುದಾನ ಘೋಷಿಸುವ ಸಾಧ್ಯತೆಯಿದೆ.

Live News
March 6, 2026, 11:25 a.m.

ಯಾವ ವಲಯಕ್ಕೆ ಎಷ್ಟು ಅನುದಾನ?

ಶಿಕ್ಷಣ: 47,224 ಕೋಟಿ ರೂ. (10%)

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ. (7%)
  • ಇಂಧನ: 29,947 ಕೋಟಿ ರೂ. (6%)
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ. (6%)
  • ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ. (5%)
  • ನೀರಾವರಿ: 22,436 ಕೋಟಿ ರೂ. (5%)
  • ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ. (5%)
  • ಕಂದಾಯ: 19,843 ಕೋಟಿ ರೂ. (4%)
  • ಸಮಾಜ ಕಲ್ಯಾಣ: 18,612 ಕೋಟಿ ರೂ. (4%)
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ. (4%)
  • ಒಳಾಡಳಿತ (ಗೃಹ): 11,424 ಕೋಟಿ ರೂ. (2%)
  • ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ. (2%)
  • ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ. (2%)
  • ಪಶುಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ. (1%)
  • ಇತರೆ ವಲಯಗಳು: 1,72,757 ಕೋಟಿ ರೂ. (37%)
March 6, 2026, 11:22 a.m.

11 ಜಿಲ್ಲೆಗಳಲ್ಲಿ ಹೊಸದಾಗಿ ಪೊಲೀಸ್‌ ಠಾಣೆ

ಕರ್ನಾಟಕದ 11 ಜಿಲ್ಲೆಗಳಲ್ಲಿ ಹೊಸದಾಗಿ ಪೊಲೀಸ್‌ ಠಾಣೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ 2 ಕಡೆ ಹೊಸ ಠಾಣೆ ಬರಲಿದ್ದು, ಉಳಿದಂತೆ ದಾವಣಗೆರೆ, ಕೋಲಾರ ಸೇರಿ 11 ಜಿಲ್ಲೆಯ ವಿವಿಧೆಡೆ ಹೊಸ ಠಾಣೆ ತಲೆ ಎತ್ತಲಿವೆ.

March 6, 2026, 11:16 a.m.

ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ

ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರವಾರ, ಯಾದಗಿರಿಯಲ್ಲಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ

March 6, 2026, 11:12 a.m.

ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ, ಮೀನುಗಾರಿಕೆಗಾಗಿ ಪೋತ್ರಾಹಧನ

ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ ಮಾಡಲಾಗುತ್ತದೆ, ಬೆಳಗಾವಿ, ಕಲಬುರಗಿಯಲ್ಲಿ ಕುರಿ ಸಾಕಾಣಿಕೆಗೆ ಪೋತ್ಸಾಹ ಧನ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

March 6, 2026, 11:03 a.m.

ಅಡಿಕೆ, ತೆಂಗು ಬೆಳೆಗಾರರ ಸಮಸ್ಯೆಗೆ 10 ಕೋಟಿ ರೂ.

ಅಡಿಕೆ ಬೆಳೆಗೆ ಭಾದಿಸುತ್ತಿರುವ ಎಲೆ ಚುಕ್ಕಿ ಹಾಗೂ ಇತರ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ.

March 6, 2026, 10:59 a.m.

ಆರೋಗ್ಯ ಕ್ಷೇತ್ರಕ್ಕೆ ಬಂಪರ್‌ ಕೊಡುಗೆ

ಆರೋಗ್ಯ ಇಲಾಖೆ ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ರೂ. ಮೀಸಲಿಡಲಾಗಿದೆ. ಐಸಿಯುಗಳಿಗೆ ಉಪಕರಣ ಮೇಲ್ದರ್ಜೆಗೇರಿಸಲು 45 ಕೋಟಿ ರೂ. . 18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್ ನೀಡಲಾಗುವುದು. ಮಾರಣಾಂತಿಕ ಕಾಯಿಲೆ ರೋಗಿಗಳಿಗೆ ಕೇರಳ ಮಾದರಿ ಗೃಹಾಧಾರಿತ ಆರೈಕೆ ಒದಗಿಸಲಾಗುವುದು. ಇಸ್ಕಾನ್ ಮೂಲಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರ ಪೂರೈಕೆ ಮಾಡಲಾಗುವುದು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಶೀಘ್ರ ಭರ್ತಿ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

March 6, 2026, 10:54 a.m.

10 GTTC ಕೇಂದ್ರಗಳ ಸ್ಥಾಪನೆ

60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಘೋಷಿಸಿದ್ದಾರೆ.

March 6, 2026, 10:54 a.m.

ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲು

ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

March 6, 2026, 10:46 a.m.

56 ಸಾವಿರ ಉದ್ಯೋಗ ಭರ್ತಿ

ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಈ ಬಾರಿ ಬಜೆಟ್​​ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. 56 ಸಾವಿರ ಉದ್ಯೋಗ ಭರ್ತಿ ಮಾಡಲಾಗುತ್ತೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

March 6, 2026, 10:43 a.m.

800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ

ರಾಜ್ಯದ 2026-27ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ ಮಾಡಲಾಗಿದೆ.

March 6, 2026, 10:39 a.m.

ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

March 6, 2026, 10:26 a.m.

ಬಜೆಟ್‌ ಮಂಡನೆ ಆರಂಭ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಪ್ರಾರಂಭಿಸಿದ್ದಾರೆ. 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಲಿದ್ದಾರೆ. ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಬಜೆಟ್‌ ಗಾತ್ರ ಹೆಚ್ಚಳವಾಗಿದೆ.

March 6, 2026, 9:57 a.m.

ವಿಧಾನ ಸಭೆಗೆ ಆಗಮಿಸಿದ ಸಿಎಂ

ಕೆಂಪು ಸೂಟ್​ಕೇಸ್​ನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಬಂದಿದ್ದು, ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಬಜೆಟ್ ಮಂಡನೆಗೆ ಅನುಮೋದನೆ ಪಡೆಯಲಿದ್ದಾರೆ.\

Budget 2026 (6)

March 6, 2026, 8:54 a.m.

ಆರ್‌. ಅಶೋಕ್‌ ಕಿಡಿ

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ರಾಜ್ಯ ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರ 1.15 ಲಕ್ಷ ಕೋಟಿ ರೂ. ಸಾಲ ಪಡೆಯುವ ನಿರೀಕ್ಷೆಯಿದೆ ಮತ್ತು ಜನರ ಮೇಲೆ ಹೊಸ ತೆರಿಗೆಗಳನ್ನು ಹೇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಬಜೆಟ್‌ನಲ್ಲಿ ಹೊಸದೇನೂ ಇರುವುದಿಲ್ಲ ಎಂದು ಹೇಳಿದ್ದಾರೆ.

March 6, 2026, 8:49 a.m.

ಯಾವುದರ ಬೆಲೆ ಹೆಚ್ಚಳವಾಗಲಿದೆ?

ಈ ಬಾರಿ ಬಜೆಟ್​​ನಲ್ಲಿ ಹಲವು ವಸ್ತುಗಳ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅಬಕಾರಿ ಸುಂಕ, ನೋಂದಣಿ ಮತ್ತು ಮುಂದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಸೇರಿದಂತೆ ಇತರೆರ ತೆರಿಗೆ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

March 6, 2026, 8:45 a.m.

ಬಜೆಟ್ ಅಧಿವೇಶನ

ಬಜೆಟ್ ಅಧಿವೇಶನವು ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, ಉಭಯ ಸದನಗಳಲ್ಲಿ 14 ದಿನಗಳ ಚರ್ಚೆ ನಡೆಯಲಿದೆ. 14 ದಿನಗಳ ಕಾಲ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಎರಡೂ ಸದನಗಳಲ್ಲಿ ಚರ್ಚೆ ನಡೆಯಲಿದೆ.

March 6, 2026, 8:37 a.m.

ಬಜೆಟ್‌ ಮೇಲಿನ ನಿರೀಕ್ಷೆಯೇನು?

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಗತಿಯಲ್ಲಿರುವ ಬೃಹತ್ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ವಿಶೇಷ ಅನುದಾನ ಘೋಷಿಸುವ ಸಾಧ್ಯತೆಯಿದೆ.

March 6, 2026, 8:03 a.m.

ಈ ಬಾರಿ ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್‌ ಮಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ಸರ್ಕಾರ ಈ ಬಾರಿ ಗ್ಯಾರಂಟಿ ಜೊತೆಗೆ ದೀರ್ಘಕಾಲೀನ ಜನಪರ ಯೋಜನೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆಯಿದೆ.

March 6, 2026, 8:03 a.m.

ಬಜೆಟ್‌ ಗಾತ್ರವೇನು?

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಈ ಬಾರಿ ಬಜೆಟ್ ಗಾತ್ರವನ್ನು ಗಣನೀಯವಾಗಿ ಹೆಚ್ಚಿಸುವ ಸಾಧ್ಯತೆಯಿದೆ. ಕಳೆದ ವರ್ಷ ಬಂಡವಾಳ ವೆಚ್ಚಕ್ಕಾಗಿ 55,877 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಈ ಬಾರಿ ಅದು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.