ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026: ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ

ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿಬಿಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ. ಅನುದಾನವನ್ನೂ ಸರಕಾರ ಮೀಸಲಿರಿಸಿದೆ.

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ

ಕರ್ನಾಟಕ ಬಜೆಟ್ -

ಹರೀಶ್‌ ಕೇರ
ಹರೀಶ್‌ ಕೇರ Mar 6, 2026 1:08 PM

ಬೆಂಗಳೂರು, ಮಾರ್ಚ್‌ 06: ರಾಜ್ಯದ ಅತ್ಯಧಿಕ ಆದಾಯದ ದೇವಾಲಯಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲು ರಾಜ್ಯ ಸರಕಾರ ಉದ್ದೇಶಿಸಿದೆ. ಇಂದು ಮಂಡಿಸಿದ 2026ರ ಬಜೆಟ್‌ನಲ್ಲಿ (Karnataka Budget 2026) ಸಿಎಂ ಸಿದ್ದರಾಮಯ್ಯ (cm siddaramaiah) ಅವರು ಈ ವಿಷಯವನ್ನು ತಿಳಿಸಿದರು.

ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿಬಿಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ. ಅನುದಾನ ಮೀಸಲಿರಿಸಿದೆ.

ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು ಮೂರು ವರ್ಷಗಳಲ್ಲಿ ಪುನರುಜ್ಜೀವನಗೊಳಿಸಲು ʻಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆʼ ಕೈಗೊಳ್ಳಲಾಗುತ್ತಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಹೊರ ರಾಜ್ಯದ ಪುಣ್ಯಕ್ಷೇತ್ರಗಳಲ್ಲಿರುವ ಕರ್ನಾಟಕ ರಾಜ್ಯದ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ವಾರಣಾಸಿಯಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿರುವುರಿಂದ ಹೊಸ ರಾಜ್ಯ ಛತ್ರವನ್ನು ನಿರ್ಮಿಸಲಾಗುವುದು. ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸೇರಿದ ಜಾಗದಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿದ್ದು, ಇದರ ನವೀಕರಣವನ್ನು ಕೈಗೊಳ್ಳಲಾಗುವುದು. ಶ್ರೀಶೈಲಂ ಕ್ಷೇತ್ರದಲ್ಲಿ ಹೊಸದಾಗಿ ಯಾತ್ರಿನಿವಾಸ ನಿರ್ಮಾಣ ಮಾಡಲಾಗುವುದು. ತುಳಜಾಪುರದಲ್ಲಿ ಪ್ರಸ್ತುತ ಇರುವ ಛತ್ರವನ್ನು ಹೊಸದಾಗಿ ನಿರ್ಮಾಣ ಮಾಡಲಾಗುವುದು.

CM Siddaramaiah: ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್‌ ನಿಷೇಧ: ಸಿಎಂ ಸಿದ್ದರಾಮಯ್ಯ ಪ್ರಸ್ತಾಪ

ಬೆಂಗಳೂರು ನಗರದ ಹೃದಯ ಭಾಗವಾದ ಕೆಂಪೇಗೌಡ ವೃತ್ತದಲ್ಲಿ ಇಲಾಖೆಗೆ ಸೇರಿದ ಬಂಡಿಶೇಷಮ್ಮ ಛತ್ರದ ಜಾಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ (PPP) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ತಂತ್ರಜ್ಞಾನ ಆಧಾರಿತ ಕೌನ್ಸೆಲಿಂಗ್ (Counselling) ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ.

Karnataka Budget 2026: ಆರೋಗ್ಯ ಇಲಾಖೆಯಲ್ಲಿ 2,500 ಖಾಲಿ ಹುದ್ದೆ ಭರ್ತಿ, ಟೈಪ್-1 ಮಧುಮೇಹಿಗಳಿಗೆ ಉಚಿತ ಇನ್ಸುಲಿನ್ ಪೆನ್‌