Cabinet meeting: ಎಸ್‌ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ; ಯಾವ ಸಮುದಾಯಕ್ಕೆ ಎಷ್ಟು ಮೀಸಲಾತಿ?
SC internal reservation: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಹಾಗೂ ಅಧ್ಯಯನ ವರದಿಯನ್ನು ಇತ್ತೀಚೆಗೆ ಸ್ವೀಕರಿಸಲಾಗಿತ್ತು. ಇದೀಗ ಒಳ ಮೀಸಲಾತಿ ಜಾರಿ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.


ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಎಸಿ ಒಳಮೀಸಲಾತಿಯನ್ನು (SC internal reservation) ಮೂರು ಗುಂಪುಗಳಾಗಿ ವಿಂಗಡಿಸಿ, ಜಾರಿ ಮಾಡಲು ವಿಶೇಷ ಸಚಿವ ಸಂಪುಟ ಸಭೆ (Cabinet meeting) ಒಪ್ಪಿಗೆ ನೀಡಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯ ಏಕ ಸದಸ್ಯ ಆಯೋಗ ಇತ್ತೀಚೆಗೆ ವರದಿ ಸಲ್ಲಿಸಿತ್ತು. ಇದೀಗ ಒಳ ಮೀಸಲಾತಿ ಜಾರಿ ಮಾಡಲು ಅಂಗೀಕಾರ ನೀಡಿದ್ದು, ಈ ಬಗ್ಗೆ ನಾಳೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಲಿದ್ದಾರೆ.
ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿಯಲ್ಲಿ ಒಳ ಮೀಸಲಾತಿಯನ್ನು 5 ಭಾಗವಾಗಿ ವರ್ಗೀಕರಣ ಮಾಡಲಾಗಿತ್ತು. ಆದರೆ, ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಿದೆ. ಎಡಗೈ ಸಮುದಾಯಕ್ಕೆ ಶೇ.6, ಬಲಗೈ ಸಮುದಾಯ ಶೇ.6, ಸ್ಪೃಶ್ಯ ಸಮುದಾಯಕ್ಕೆ ಶೇ. 5 ಒಳ ಮೀಸಲಾತಿ ನೀಡಲು ಅನುಮೋದನೆ ನೀಡಲಾಗಿದೆ.
ಎಡಗೈ ಸಮುದಾಯದಲ್ಲಿ 18 ಜಾತಿಗಳಿದ್ದರೆ, ಬಲಗೈ ಸಮುದಾಯದಲ್ಲಿ 20 ಜಾತಿಗಳು ಹಾಗೂ ಸ್ಪೃಶ್ಯ ಸಮುದಾಯದಲ್ಲಿ 63 ಜಾತಿಗಳಿವೆ.
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಹಾಗೂ ಅಧ್ಯಯನ ವರದಿಯನ್ನು ಇತ್ತೀಚೆಗೆ ಸ್ವೀಕರಿಸಲಾಗಿತ್ತು.
ಯಾವ ಜಾತಿಗಳು ಯಾವ ಸಮುದಾಯಕ್ಕೆ ಸೇರುತ್ತವೆ?
ದಲಿತ ಎಡಗೈ ಜಾತಿಗಳು:
ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್.
ದಲಿತ ಬಲಗೈ ಜಾತಿಗಳು
ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.
ಇತರೆ 5% ಮೀಸಲಾತಿ ಒಳಪಡುವ ಜಾತಿಗಳು
ಬಕುಡ, ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ; ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ; ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್; ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ; ತಿರ್ಗರ್, ತಿರ್ಬಂದ.
ಈ ಸುದ್ದಿಯನ್ನೂ ಓದಿ | Internal Reservation: ನ್ಯಾ. ನಾಗಮೋಹನ್ ದಾಸ್ ನಿಯೋಗದಿಂದ ಸಿಎಂಗೆ ಒಳಮೀಸಲು ವರದಿ ಸಲ್ಲಿಕೆ
ಅಕ್ರಮ ಗಣಿಗಾರಿಕೆ ತಡೆಗೆ
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮಂಗಳವಾರ ರಾತ್ರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಯಿತು. ಈ ಸಚಿವ ಸಂಪುಟದ ಸಭೆಯಲ್ಲಿ ಅಕ್ರಮ ಗಣಿಗಾರಿಕೆ ವರದಿಗೆ ಒಪ್ಪಿಗೆ ಸೂಚಿಸಲಾಗಿದೆ.
ಅಕ್ರಮ ಗಣಿಗಾರಿಕೆ ಸಂಬಂಧ ವಸೂಲಿ ಆಯುಕ್ತರ ನೇಮಕಾತಿಗೆ ಹೊಸ ಕಾನೂನು ತರಲಿದೆ. ಇದೇ ಅಧಿವೇಶನದಲ್ಲಿ ಹೊಸ ಕಾನೂನು ಮಂಡನೆಗೂ ಸರ್ಕಾರ ಸಿದ್ಧಗೊಂಡಿದೆ. ಹೊಸ ಕಾನೂನು ಮಂಡನೆಗೆ ಇಂದಿನ ಕ್ಯಾಬಿನೇಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.