ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌; ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆಗೆ ಪ್ರಾರ್ಥನೆ

ತಿರುಮಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ದಂಪತಿ ಮಂಗಳವಾರ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌ ಅವರು. ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ದಂಪತಿ. -

Profile
Siddalinga Swamy May 19, 2026 3:21 PM

ತಿರುಮಲ, ಮೇ 19: ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ತಿರುಮಲದಲ್ಲಿ (Tirumala Tirupati) ಮಂಗಳವಾರ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಇಡೀ ದೇಶ ಶಾಂತಿಯಿಂದ ಕೂಡಿರಲಿ. ಸವಾಲುಗಳನ್ನು ಸಮರ್ಥನೆವಾಗಿ ಎದುರಿಸಲಿ ಎಂದು ಕೋರಿಕೊಂಡಿದ್ದೇನೆ. ಈ ಮಹತ್ವದ ದಿನದಂದು ಇಲ್ಲಿಗೆ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಬಹಳ ಸಮಯದ ನಂತರ ಅಂದರೆ ಆರೇಳು ವರ್ಷಗಳ ನಂತರ ನಾನು ಇಲ್ಲಿಗೆ ಭೇಟಿ ನೀಡಿದ್ದೇನೆ. ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಬಹಳಷ್ಟು ಬದಲಾವಣೆಗಳನ್ನು, ಬಹಳಷ್ಟು ಅಭಿವೃದ್ಧಿಗಳನ್ನು ಮಾಡಿದೆ. ಶಿಸ್ತು, ಉತ್ತಮ ಶುಚಿತ್ವ ಕಾಪಾಡಿದೆ. ಉತ್ತಮ ಆಡಳಿತ ನಡೆಸುತ್ತಿದೆ. ಸರಕಾರ ಉತ್ತಮ ಕೆಲಸ ಮಾಡಿದೆ. ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದರು.

ಬಲಿಷ್ಠ ಆರ್ಥಿಕ ವ್ಯವಸ್ಥೆ ಹಾಳಾಗಿದೆ; ಪ್ರಧಾನಿ ಈ ದೇಶದ ಜನರ ಕ್ಷಮೆ ಕೇಳಬೇಕು ಎಂದು ಡಿ.ಕೆ.ಸುರೇಶ್ ಆಗ್ರಹ

ಶ್ರೀ ವೆಂಕಟೇಶ್ವರನ ದರ್ಶನದಿಂದ ಸಂತಸವಾಗಿದೆ. ಟಿಟಿಡಿಯ ಅಧ್ಯಕ್ಷರು ಕೂಡ ತಮ್ಮ ತಂಡದೊಂದಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಕಂದಾಯ ಸಚಿವರನ್ನು ಭೇಟಿ ಮಾಡಿದೆ. ಅವರೂ ಇಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ನಾನು ಅವರೆಲ್ಲರಿಗೂ ಶುಭ ಹಾರೈಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.