KCET Results 2025: ಇಂದು ಸಿಇಟಿ ಫಲಿತಾಂಶ, ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ವಿವರ
ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ. ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KEA ಯ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಪರಿಶೀಲಿಸಬಹುದು.


ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶ ಇಂದು (ಮೇ 24) ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಬಳಿಕ ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ. ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KEA ಯ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಪರಿಶೀಲಿಸಬಹುದು.
ಸಿಇಟಿ ರಿಸಲ್ಟ್ ಚೆಕ್ ಮಾಡುವ ವಿಧಾನ
ಹಂತ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪೋರ್ಟಲ್ https://cetonline.karnataka.gov.in/kea ಗೆ ಹೋಗಿ.
ಹಂತ 2: ಮುಖಪುಟದಲ್ಲಿ “KCET ಫಲಿತಾಂಶಗಳು 2024” ಎಂದು ಲೇಬಲ್ ಮಾಡಲಾದ ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ.
ಹಂತ 3: ಗೊತ್ತುಪಡಿಸಿದ ಕ್ಷೇತ್ರಗಳಲ್ಲಿ ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳೊಂದಿಗೆ ನಿಮ್ಮ KCET ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.
ಹಂತ 4: ಮುಂದುವರೆಯಲು “Submit” ಮೇಲೆ ಕ್ಲಿಕ್ ಮಾಡಿ.
ಹಂತ 5: ನಿಮ್ಮ KCET ಫಲಿತಾಂಶವನ್ನು ಪರದೆಯ ಮೇಲೆ ಬರುತ್ತದೆ.
ಹಂತ 6: ಈ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್‌ಔಟ್ ತೆಗೆದಿಟ್ಟುಕೊಳ್ಳಬಹುದು.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 17, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿದ್ದು, ಇದರ ಫಲಿತಾಂಶ ಪ್ರಟಕವಾಗಲಿದೆ. ಕರ್ನಾಟಕದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ನಿರ್ಣಾಯಕವಾಗಿದೆ.
ಇದನ್ನೂ ಓದಿ: KCET Answer Key 2025: ಸಿಇಟಿ 2025 ಕೀ ಉತ್ತರ ಪ್ರಕಟ; ಹೀಗೆ ಚೆಕ್ ಮಾಡಿ