HD Deve gowda: ಎಚ್‌ಡಿ ದೇವೇಗೌಡರಿಗೆ ರಾಜ್ಯ ಸರ್ಕಾರದಿಂದ 1.25 ಕೋಟಿ ರೂ. ಬೆಲೆಯ ಕಾರು!
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಓಡಾಡಲು ರಾಜ್ಯ ಸರ್ಕಾರ 1.25 ಕೋಟಿ ರೂಪಾಯಿ ಮೌಲ್ಯದ ಕಾರು ನೀಡುತ್ತಿದೆ. ಐಷಾರಾಮಿ ಹಾಗೂ ಗರಿಷ್ಠ ಸುರಕ್ಷತೆಯ Volvo XC 90 (ವೋಲ್ವೋ ಎಕ್ಸ್‌ಸಿ 90 ) ಕಾರು ಖರೀದಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿ ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಎಚ್‌ಡಿ ದೇವೇಗೌಡ -
ಬೆಂಗಳೂರು, ಏ.20: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ (HD Deve gowda) 1.25 ಕೋಟಿ ರೂ. ಬೆಲೆಯ ಕಾರು ಖರೀದಿಗೆ ರಾಜ್ಯ ಸರ್ಕಾರ (Karnataka government) ಒಪ್ಪಿಗೆ ನೀಡಿದೆ. ಈ ಕುರಿತು ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.
92ರ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಸಕ್ರಿಯರಾಗಿರುವ, ಜೆಡಿಎಸ್ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುವ ಮಾಜಿ ಪ್ರಧಾನಿಗೆ ದುಬಾರಿ ಕಾರು ಖರೀದಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ದೇವೇಗೌಡರಿಗೆ ಓಡಾಡಲು ರಾಜ್ಯ ಸರ್ಕಾರ 1.25 ಕೋಟಿ ರೂಪಾಯಿ ಕಾರು ನೀಡುತ್ತಿದೆ. ಐಷಾರಾಮಿ ಹಾಗೂ ಗರಿಷ್ಠ ಸುರಕ್ಷತೆಯ Volvo XC 90 (ವೋಲ್ವೋ ಎಕ್ಸ್‌ಸಿ 90 ) ಕಾರು ಖರೀದಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿ ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಹೆಚ್.ಡಿ ದೇವೇಗೌಡ ಅವರಿಗೆ VOLVO-XC90 ವಾಹನವನ್ನು ರೂ.1,25,65,388/-ಗಳ ವೆಚ್ಚದಲ್ಲಿ ಮೆ: Martial Motors Pvt. Ltd., ಬೆಂಗಳೂರು ಇವರಿಂದ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ದೇವೇಗೌಡರಿಗೆ ಸರ್ಕಾರ ಖರೀದಿಗೆ ಒಪ್ಪಿಗೆ ನೀಡಿರುವ ವೋಲ್ವೋ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. 2.0 ಲೀಟರ್ ಟರ್ಬೋ ಎಂಜಿನ್ ಹೊಂದಿರುವ ಈ ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.
ಲೆವೆಲ್ 2 ಅಡಾಸ್ (ADAS) ಫೀಚರ್, ಹಿಲ್ ಸ್ಟಾರ್ಟ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಪಾರ್ಕಿಂಗ್ ಅಸೆಸ್ಟೆಂಟ್, ಎಬಿಎಸ್, ಎಬಿಡಿ, 7 ಏರ್ ಬ್ಯಾಗ್, 360 ಡಿಗ್ರಿ ಕ್ಯಾಮೆರಾ ಸೇರಿದಂತೆ ಗರಿಷ್ಠ ಸುರಕ್ಷತಾ ಫೀಚರ್ಸ್ ಈ ಕಾರಿನಲ್ಲಿದೆ. ಇನ್ನು ಕಾರನ್ನು ಮಾಡಿಫಿಕೇಶನ್ ಮಾಡಲು ಸಾಧ್ಯವಿದೆ. ಸದ್ಯ ದೇವೇಗೌಡರಿಗೆ ಕಾರು ಹತ್ತಿ ಇಳಿಯಲು, ಕಾರಿನಲ್ಲಿ ಕುಳಿತುಕೊಳ್ಳಲು ಕೆಲ ಮಾಡಿಫಿಕೇಶನ್ ಮಾಡುವ ಸಾಧ್ಯತೆಗಳಿವೆ.
12.3 ಇಂಚಿನ್ ಇನ್ಸ್‌ಸ್ಟ್ರುಮೆಂಟ್ ಕ್ಲಸ್ಟರ್, 11.2 ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಪನರೋಮಿಕ್ ಸನ್‌ರೂಫ್, ಕ್ಲೈಮೇಟ್ ಕಂಟ್ರಲ್ ಸೇರಿದಂತೆ ಹಲವು ಫೀಚರ್ಸ್ ಈ ಕಾರಿನಲ್ಲಿದೆ.
HD Devegowda: ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ