ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Menstrual Leave: ರಾಜ್ಯದ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌! ಶೀಘ್ರದಲ್ಲೇ ಮುಟ್ಟಿನ ರಜೆ?

Working Women: ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ಈ ಬಗ್ಗೆ ಸಿಎಂ ಶೀಘ್ರದಲ್ಲೇ ನೀಡುವ ಸಾಧ್ಯತೆ ಇದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಮುಟ್ಟಿನ ರಜೆ ನೀತಿಯ ಕುರಿತು ಚರ್ಚಿಸುವ ಸಾಧ್ಯತೆಯಿದೆ.

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಶೀಘ್ರದಲ್ಲೇ ಮುಟ್ಟಿನ ರಜೆ?

-

Profile Sushmitha Jain Oct 9, 2025 3:47 PM

ಬೆಂಗಳೂರು: ಸರ್ಕಾರಿ ಕಚೇರಿಗಳು(Government offices), ಖಾಸಗಿ ಕಂಪನಿಗಳು(Private companies) ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ(Industrial Sectors) ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಪ್ರತಿ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಮುಟ್ಟಿನ ರಜೆ ನೀತಿಗೆ (Periods Leave Policy-2025) ಕರ್ನಾಟಕ ಸರ್ಕಾರ(State Government) ಶೀಘ್ರದಲ್ಲೇ ಅನುಮೋದನೆ ನೀಡುವ ಸಾಧ್ಯತೆ ಇದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಮುಟ್ಟಿನ ರಜೆ ನೀತಿಯ ಕುರಿತು ಚರ್ಚಿಸುವ ಸಾಧ್ಯತೆಯಿದೆ.

ಕ್ರೈಸ್ಟ್ ವಿಶ್ವವಿದ್ಯಾಲಯದ ಸಪ್ನಾ ಎಸ್ ಅವರ ನೇತೃತ್ವದ 18 ಸದಸ್ಯರ ಸಮಿತಿಯು ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನುಭವಿಸುವ ದೈಹಿಕ ಬದಲಾವಣೆಗಳು, ಸವಾಲುಗಳು ಮತ್ತು ವಿಶ್ರಾಂತಿಯ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಈ ನೀತಿಯನ್ನು ಶಿಫಾರಸ್ಸು ಮಾಡಿದೆ. ಸರ್ಕಾರವು ಈಗಾಗಲೇ ಈ ನೀತಿಯ ಲಾಭ-ಒತ್ತಾಸೆಗಳ ಬಗ್ಗೆ, ವಿಶೇಷವಾಗಿ ಬಟ್ಟೆ ಕಾರ್ಖಾನೆಗಳಂತಹ ಮಹಿಳಾ ಆಧಾರಿತ ಉದ್ಯಮಗಳ ಮೇಲಿನ ಸಂಭಾವ್ಯ ಪರಿಣಾಮಗಳು ಸೇರಿದಂತೆ ಸಾಧಕ-ಬಾಧಕಗಳನ್ನು ಪರಿಶೀಲಿಸಿದೆ. ಅಲ್ಲದೇ ವಿವಿಧ ಇಲಾಖೆಗಳಿಂದ ಹಾಗೂ ಸಂಸ್ಥೆಗಳಿಂದ ಅಭಿಪ್ರಾಯಗಳನ್ನು ಕೂಡ ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನೂ ಓದಿ: AI Video: ಸುಪ್ರಿಂ ಕೋರ್ಟ್ ಸಿಜೆಐ ಮೇಲೆ ಶೂ ಎಸೆದಿರುವಂತೆ AI ವಿಡಿಯೋ ಸೃಷ್ಟಿಸಿದ ವ್ಯಕ್ತಿ ವಿರುದ್ಧ ಎಫ್ಐಆರ್

ಈ ನೀತಿಗೆ ಅನುಮೋದನೆ ದೊರೆತರೆ, ಮಹಿಳಾ ಉದ್ಯೋಗಿಗಳಿಗೆ ಎರಡು ದಿನಗಳ ಮಾಸಿಕ ಮುಟ್ಟಿನ ರಜೆ ನೀಡುವ ಬಿಹಾರ ಮತ್ತು ಇತ್ತೀಚೆಗೆ ತನ್ನ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಇದೇ ರೀತಿಯ ಒಂದು ದಿನದ ವೇತನ ಸಹಿತ ರಜೆ ನೀತಿಯನ್ನು ಘೋಷಿಸಿದ ಒಡಿಶಾದಂತಹ ಇತರ ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಲಿದೆ. ಕೇರಳವು ಕೈಗಾರಿಕಾ ತರಬೇತಿ ಸಂಸ್ಥೆಗಳ (ITI) ಮಹಿಳಾ ತರಬೇತಿದಾರರಿಗೆ ಎರಡು ದಿನಗಳ ಮುಟ್ಟಿನ ರಜೆಯನ್ನು ಪರಿಚಯಿಸಿದೆ. ಬಿಹಾರ ಮತ್ತು ಒಡಿಶಾದಲ್ಲಿ, ವಾರ್ಷಿಕ 12 ದಿನಗಳ ಮುಟ್ಟಿನ ರಜೆ ನೀತಿಯಿದೆ, ಆದರೆ ಅದು ಅವರ ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ. ಕರ್ನಾಟಕವು ಈ ನೀತಿಯನ್ನು ಸಮಗ್ರವಾಗಿ ಪರಿಚಯಿಸುವ ಮೊದಲ ರಾಜ್ಯವಾಗಲಿದೆ. ಸರ್ಕಾರಿ ಮತ್ತು ಖಾಸಗಿ ವಲಯವನ್ನು ಲೆಕ್ಕಿಸದೆ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಇದು ಅನ್ವಯಿಸುತ್ತದೆ. ಇದು ಪ್ರಗತಿಪರ ಮಸೂದೆಯಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಐದು ಲಕ್ಷ ಕಾರ್ಮಿಕರನ್ನು ಹೊಂದಿರುವ ನೂರಾರು ಗಾರ್ಮೆಂಟ್ ಕಾರ್ಖಾನೆಗಳಿವೆ, ಅವುಗಳಲ್ಲಿ ಸುಮಾರು 90 ಪ್ರತಿಶತ ಮಹಿಳೆಯರು. ಐಟಿ ಮತ್ತು ಇತರ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಈ ನೀತಿಯು ಅನುಮೋದನೆ ಪಡೆದರೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಸಹಾಯವಾಗಲಿದೆ ಎಂದು ಲಾಡ್ ಹೇಳಿದ್ದಾರೆ. ಸದ್ಯ ಐಟಿ ಉದ್ಯೋಗಿಗಳ ಸಂಘ ಮತ್ತು ಗಾರ್ಮೆಂಟ್ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಮಹಿಳೆಯರು ಬಹುದಿನಗಳ ಬೇಡಿಕೆ ಇದೀಗ ಈಡೇರುವ ಕಾಲ ಕೂಡಿಬಂದಂತಾಗಿದೆ.