ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Politics: ರಾಜ್ಯ ಕಾಂಗ್ರೆಸ್ ಗೊಂದಲಕ್ಕೆ ನಾವಲ್ಲ ಕಾರಣ, ನೀವೇ ಪರಿಹರಿಸಿಕೊಳ್ಳಿ: ಕೈಚೆಲ್ಲಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನುಡಿದಿದ್ದಾರೆ.

ರಾಜ್ಯ ಕಾಂಗ್ರೆಸ್ ಗೊಂದಲ ಅವರೇ ಪರಿಹರಿಸಿಕೊಳ್ಳಲಿ: ಕೈಚೆಲ್ಲಿದ ಖರ್ಗೆ

ಮಲ್ಲಿಕಾರ್ಜುನ ಖರ್ಗೆ -

ಹರೀಶ್‌ ಕೇರ
ಹರೀಶ್‌ ಕೇರ Dec 22, 2025 10:14 AM

ಕಲಬುರಗಿ, ಡಿ.22: ರಾಜ್ಯದಲ್ಲಿ ನಾಯಕತ್ವ ಗೊಂದಲ (Karnataka Politics) ಕಾಂಗ್ರೆಸ್‌ ಹೈಕಮಾಂಡ್‌ (Congress High Command) ಸೃಷ್ಟಿ ಮಾಡಿಲ್ಲ, ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಹೈಕಮಾಂಡ್‌ ಅಂದ್ರೆ ಹೇಗೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ (Karnataka Congress) ಸಿಎಂ- ಡಿಸಿಎಂ ಬಣದ ಶಾಸಕರು, ಸಚಿವರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನು ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ ಸೆಷನ್‌ನಲ್ಲಿ ಹೇಳಿಕೆ ಕೊಟ್ಟಿದ್ದರು. ನಂತರ, ನನಗೂ ಸಿಎಂಗೂ ಒಪ್ಪಂದವಾಗಿದೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದರು. ಇದರ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಸೂಕ್ಷ್ಮ ಸಂದೇಶ ಕೊಟ್ಟಿದ್ದಾರೆ. ಜೊತೆಗೆ ಇಲ್ಲಿನ ಸಮಸ್ಯೆಯನ್ನು ಇಲ್ಲೇ ಬಗೆಹರಿಸಿಕೊಳ್ಳುವಂತೆ ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರ ಕುರಿತು ಮಾತನಾಡಿದ ಅವರು, ಗೊಂದಲವನ್ನು ಹೈಕಮಾಂಡ್‌ ಮಾಡಿಲ್ಲ. ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂತ ಹೇಳಿದ್ರೆ ಹೇಗೆ ಅಂತ ಪ್ರಶ್ನೆ ಮಾಡಿದ್ದಾರೆ.

40 ಆಪ್ತ ಶಾಸಕರ ಜೊತೆ ಡಿಕೆ ಶಿವಕುಮಾರ್‌ ಡಿನ್ನರ್‌ ಮೀಟಿಂಗ್, ಏನೇನು ಚರ್ಚೆ?

ಮುಂದುವರಿದು, ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.