ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka SSLC Result: ಹಲವು ದಾಖಲೆ ಬರೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ, 7 ವಿದ್ಯಾರ್ಥಿಗಳು ಔಟ್‌ ಆಫ್‌ ಔಟ್

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಾಲಕರು ಉತ್ತಮ ಸಾಧನೆ ಮಾಡಿದ್ದಾರೆ. ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇಕಡ 91ರಷ್ಟು ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶದಲ್ಲಿ ಪ್ರಗತಿಯಾಗಿದೆ. ಗ್ರಾಮೀಣ ಭಾಗದಲ್ಲಿ ಸಹ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಶೇ.92ರಷ್ಟು ಫಲಿತಾಂಶ ಬಂದಿದೆ.

ಹಲವು ದಾಖಲೆ ಬರೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ, 7 ಮಕ್ಕಳು ಔಟ್‌ ಆಫ್‌ ಔಟ್

ಸಚಿವ ಮಧು ಬಂಗಾರಪ್ಪ -

ಹರೀಶ್‌ ಕೇರ
ಹರೀಶ್‌ ಕೇರ Apr 23, 2026 12:46 PM

ಬೆಂಗಳೂರು, ಏ.23: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಸಲ ಹಲವು ದಾಖಲೆಗಳನ್ನು ಬರೆದಿದೆ. ಈ ಬಾರಿ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದಾರೆ.

ದಾವಣಗೆರೆಯ ಭರತ್‌, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರ ಧನುಷ್‌ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಟಾಪ್‌ 5 ಜಿಲ್ಲೆಗಳು ಹೀಗಿವೆ:

ದಕ್ಷಿಣ ಕನ್ನಡ - ಶೇ 98.4

ಉಡುಪಿ - ಶೇ 98.18

ಉತ್ತರ ಕನ್ನಡ - ಶೇ 98.02

ಹಾಸನ - ಶೇ 97.51

ಮಂಡ್ಯ - ಶೇ 97.4

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಾಲಕರು ಉತ್ತಮ ಸಾಧನೆ ಮಾಡಿದ್ದಾರೆ. ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇಕಡ 91ರಷ್ಟು ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶದಲ್ಲಿ ಪ್ರಗತಿಯಾಗಿದೆ. ಗ್ರಾಮೀಣ ಭಾಗದಲ್ಲಿ ಸಹ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಶೇ.92ರಷ್ಟು ಫಲಿತಾಂಶ ಬಂದಿದೆ. ನಗರಕ್ಕಿಂತ ಗ್ರಾಮೀಣ ಭಾಗದ ಮಕ್ಕಳೇ ಹೆಚ್ಚು ಸಾಧನೆ ಮಾಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ. ವಿದ್ಯಾರ್ಥಿಗಳು ಇದೀಗ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು

ಹಿಂದಿ ಸೇರಿ ತೃತೀಯ ಭಾಷೆಗೆ ಅಂಕ

ಪ್ರಸಕ್ತ ವರ್ಷದಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್‌ ನೀಡಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಬಗ್ಗೆ ಹೈಕೋರ್ಟ್‌ನಿಂದ ತಡೆ ನೀಡಿದ್ದು, ಗ್ರೇಡ್‌ ಬೇಡ ಅಂಕ ನೀಡಲು ಆದೇಶಿಸಲಾಗಿತ್ತು. ಹೀಗಾಗಿ, ಈ ವರ್ಷ ಅಂಕ ನೀಡಲಾಗುತ್ತಿದೆ. 625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಿದೆ. ತೃತೀಯ ಭಾಷೆ ಪಾಸ್‌ ಆಗುವುದು ಕಡ್ಡಾಯವಾಗಿದೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು 3 ವಿಧಾನಗಳ ಮೂಲಕ ಸುಲಭವಾಗಿ ಪಡೆಯಬಹುದಾಗಿದೆ. ಅಧಿಕೃತ ವೆಬ್‌ಸೈಟ್: https://karresults.nic.in/ ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು. ಮೊಬೈಲ್ ಆಪ್: ‘KarnatakaOne Mobile App’ ಮೂಲಕವೂ ರಿಸಲ್ಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ವಾಟ್ಸಾಪ್/ಎಸ್‌ಎಂಎಸ್‌: ವಿದ್ಯಾರ್ಥಿಗಳು ಮಂಡಳಿಯಲ್ಲಿ ನೋಂದಾಯಿಸಿರುವ ತಮ್ಮ ಮೊಬೈಲ್ ಸಂಖ್ಯೆಗೆ ನೇರವಾಗಿ ವಾಟ್ಸಾಪ್ ಮತ್ತು ಎಸ್‌ಎಂ ಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗುತ್ತದೆ.