KSRTC strike: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು; ಪ್ರತಿಭಟನೆಗೆ ಸಜ್ಜು
38 ತಿಂಗಳ ಹಿಂಬಾಕಿ ಹಣ, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಯನ್ನ ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ನೌಕರರು ಮತ್ತೆ ಮುಷ್ಕರಕ್ಕೆ ಧುಮುಕುತ್ತಿದ್ದಾರೆ. ಏಪ್ರಿಲ್ 8 ರಿಂದ ಚಿತ್ರದುರ್ಗದಿಂದ ಪಾದಯಾತ್ರೆ ಆರಂಭವಾಗಲಿದ್ದು, ಏಪ್ರಿಲ್ 21ರಂದು ಬೆಂಗಳೂರು ತಲುಪಲಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಏ.07: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು (bmtc ksrtc strike) ಸಮರ ಸಾರಲು ಮುಂದಾಗಿದ್ದಾರೆ. ಸಾಲು ಸಾಲು ಸಂಧಾನ ಸಭೆ ವಿಫಲವಾದ ಬಳಿಕ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ (Protest) ಹಾದಿ ಹಿಡಿದಿದ್ದಾರೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾರಿಗೆ ನೌಕರರು (Transport Employees) ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ. 38 ತಿಂಗಳ ಹಿಂಬಾಕಿ ಹಣ, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಯನ್ನ ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ನೌಕರರು ಮತ್ತೆ ಮುಷ್ಕರಕ್ಕೆ ಧುಮುಕುತ್ತಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ನಾಲ್ಕು ಸಂಘಟನೆಗಳ ಒಕ್ಕೂಟ ಪ್ರತಿಭಟನೆಗೆ ಕರೆ ನೀಡಿದೆ. ಚುನಾವಣೆಗೂ ಪೂರ್ವ ಸರ್ಕಾರ ಕೊಟ್ಟ ಭರವಸೆ ನೀಡಿಲ್ಲ. ಹೀಗಾಗಿ ಸಾರಿಗೆ ನೌಕರರು ಭರವಸೆ ಈಡೇರಿಸುವಂತೆ ಪಟ್ಟು ಹಿಡಿದಿದ್ದು, ಸಾರಿಗೆ ನೌಕರರ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿದ್ದಾರೆ. ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನೆಗೆ ಮುಂದಾದ ನೌಕರರು, ಏಪ್ರಿಲ್ 8ರಿಂದ ಪಾದಯಾತ್ರೆ ಆರಂಭಿಸಲಿದ್ದಾರೆ. ಏಪ್ರಿಲ್ 8 ರಿಂದ ಚಿತ್ರದುರ್ಗದಿಂದ ಪಾದಯಾತ್ರೆ ಆರಂಭವಾಗಲಿದ್ದು, ಏಪ್ರಿಲ್ 21ರಂದು ಬೆಂಗಳೂರು ತಲುಪಲಿದ್ದಾರೆ. ಏಪ್ರಿಲ್ 21 ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಸಾರಿಗೆ ಮುಖಂಡರು ನಿರ್ಧರಿಸಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳೇನು?
ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ
2024ರ ಜನವರಿ 1ರಿಂದ ಅನ್ವಯ ಆಗುವಂತೆ ಸಾರಿಗೆ ನೌಕರರಿಗೆ ಸಮಾನ ವೇತನ ನೀಡಬೇಕು
2020ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದೆ
ವೇತನ ಪರಿಷ್ಕರಣೆಯ 38 ತಿಂಗಳ ಪೂರ್ಣವಾಗಿ ಹಿಂಬಾಕಿ ನೀಡಬೇಕು
ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ನಡೆಸಬೇಕು ಎಂಬ ಬೇಡಿಕೆಗಳನ್ನ ಸಾರಿಗೆ ಸೌಕರರು ಸರ್ಕಾರ ಮುಂದಿಟ್ಟಿದ್ದಾರೆ.
KSRTC ಸೇರಿದಂತೆ ಒಟ್ಟು 4 ನಿಗಮದ ಸಾರಿಗೆ ನೌಕರರು ಭಾಗಿಯಾಗುವ ಸಾಧ್ಯತೆ ಇದೆ. ಬಸ್ ಓಡಾಟ ಬಂದ್ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಎಂದಿನಂತೆ ಸಂಚಾರ ಇರಲಿದೆ. ಬೇಡಿಕೆ ಈಡೇರದಿದ್ದರೆ ಓಡಾಟಕ್ಕೆ ಬ್ರೇಕ್ ಬೀಳೋ ಸಾಧ್ಯತೆ ಇದೆ.
KSRTC Strike: ನಾಳೆ ರಾಜ್ಯಾದ್ಯಂತ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ; ಬಸ್ ಸಂಚಾರ ಇರುತ್ತಾ?