ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Weather: ರಾಜ್ಯಾದ್ಯಂತ ಮುಂದುವರಿದ ಚಳಿ, ಒಣ ಹವೆ

ಗರಿಷ್ಠ ತಾಪಮಾನದಲ್ಲಿ (Temperature) ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣ ಹವೆ ಮುಂದುವರಿದಿದೆ. ದೂಳಿನ ಸಮಸ್ಯೆ ಮುಂದಿನ ದಿನಗಳಲ್ಲಿ ಹೆಚ್ಚಲಿದೆ. ರಾಜ್ಯದ ಜನತೆ ಬೆಚ್ಚಗಿರಲು ಸೂಚಿಸಲಾಗಿದೆ.

ರಾಜ್ಯಾದ್ಯಂತ ಮುಂದುವರಿದ ಚಳಿ, ಒಣ ಹವೆ

ರಾಜ್ಯ ಹವಾಮಾನ -

ಹರೀಶ್‌ ಕೇರ
ಹರೀಶ್‌ ಕೇರ Feb 6, 2026 8:49 AM

ಬೆಂಗಳೂರು, ಫೆ.06: ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದ (Karnataka Weather Forecast) ವಿವಿಧ ಭಾಗಗಳಲ್ಲಿ ಚಳಿ (cold) ಮುಂದುವರಿದಿದೆ. ಇನ್ನು ಮುಂದಿನ ಐದು ದಿನಗಳ ವರೆಗೆ ಹವಾಮಾನದಲ್ಲಿ ದೊಡ್ಡ ವ್ಯತ್ಯಾಸವಿಲ್ಲ. ಆದರೆ ಗರಿಷ್ಠ ತಾಪಮಾನದಲ್ಲಿ (Temperature) ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣ ಹವೆ ಮುಂದುವರಿದಿದೆ. ದೂಳಿನ ಸಮಸ್ಯೆ ಮುಂದಿನ ದಿನಗಳಲ್ಲಿ ಹೆಚ್ಚಲಿದೆ. ರಾಜ್ಯದ ಜನತೆ ಬೆಚ್ಚಗಿರಲು ಸೂಚಿಸಲಾಗಿದೆ.

ಉತ್ತರ ಕೇರಳ ಮತ್ತು ನೆರೆಹೊರೆ ಪ್ರದೇಶಗಳ ಮೇಲ್ಭಾಗದ ವಾಯು ಚಂಡಮಾರುತ ಪರಿಚಲನೆ ಇದ್ದು, ಇದೀಗ ಸರಾಸರಿ ಸಮುದ್ರ ಮಟ್ಟದಿಂದ 15 ರಿಂದ 3.1 ಕಿ.ಮೀ ಎತ್ತರದಲ್ಲಿ ಕಂಡುಬಂದಿದೆ. ಕೇರಳ - ಕರ್ನಾಟಕ ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಟ್ರಫ್ ಕಡಿಮೆ ಗುರುತಿಸಲ್ಪಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಸಮತಟ್ಟಾದ ಪ್ರದೇಶ ಮಂಡ್ಯದಲ್ಲಿ ಕನಿಷ್ಠ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಮುಂದಿನ 5 ದಿನಗಳ ವರೆಗೆ ಹವಾಮಾನದಲ್ಲಿ ಹೆಚ್ಚಿನ ವ್ಯತ್ಯಾಸ ಇಲ್ಲ. ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ 48 ಗಂಟೆಯ ಅವಧಿಯಲ್ಲಿ ಶುಭ್ರ ಆಕಾಶ ಇರಲಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ ಆಗಿದ್ದು, 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ಆಗಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ಇರಲಿದೆ.

Health Tips: ಚಳಿ ಚಳಿ ತಾಳೆನು ಈ ಚಳಿಯ...ಚಳಿಯಿಂದ ನಿಮ್ಮ ಅರೋಗ್ಯವನ್ನು ಹೀಗೆ ಕಾಪಾಡಿಕೊಳ್ಳಿ

ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್ ಇತ್ತು. ಇನ್ನು ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಧಾರವಾಡ, ಬೀದರ್, ಬಾಗಲಕೋಟೆ, ಗದಗ ಮತ್ತು ವಿಜಯಪುರ ಮತ್ತು ಹಾಸನ, ಮಂಡ್ಯ ಎಡಬ್ಲ್ಯೂಎಸ್, ಬೆಂಗಳೂರು ಕೆಐಎಎಲ್ ಎಪಿ, ಬೆಂಗಳೂರು ಹೆಚ್‌ಎಎಲ್ ಇಂಟರ್ ಎಪಿ, ದಾವಣಗೆರೆ ಮತ್ತು ಶಿವಮೊಗ್ಗದ ಭಾಗದಲ್ಲಿ ಕನಿಷ್ಠ ತಾಪಮಾನವು 13.1 ಡಿಗ್ರಿ ಸೆಲ್ಸಿಯಸ್‌ನಿಂದ 15.5 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.

ಉತ್ತರ ಒಳ ಕರ್ನಾಟಕದ ಹಾವೇರಿ, ಬೆಳಗಾವಿ ವಿಮಾನ ನಿಲ್ದಾಣ, ರಾಯಚೂರು, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆ. ದಕ್ಷಿಣ ಒಳ ಕರ್ನಾಟಕದ ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ ಸೇರಿದಂತೆ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 15.6 ಡಿಗ್ರಿ ಸೆಲ್ಸಿಯಸ್‌ನಿಂದ 19.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳ ಕರ್ನಾಟಕದ ಚಿಂತಾಮಣಿ ಭಾಗದಲ್ಲಿ 9.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಕರ್ನಾಟಕದ ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಶಕ್ತಿನಗರದ ಭಾಗದಲ್ಲಿ 21.1ರಿಂದ 24.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Clitoria ternatea: ಚಳಿ-ಮಳೆಗಿರಲಿ ಶಂಖಪುಷ್ಪ ಹೂವಿನ ಚಹಾ!