ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka weather: ರಾಜ್ಯಾದ್ಯಂತ ಒಣ ಹವೆ, ಇಂದು ತುಂತುರು ಮಳೆ ಸಂಭವ

ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

ರಾಜ್ಯಾದ್ಯಂತ ಒಣ ಹವೆ, ಇಂದು ತುಂತುರು ಮಳೆ ಸಂಭವ

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 24, 2026 10:21 AM

ಬೆಂಗಳೂರು, ಫೆ.24: ರಾಜ್ಯದಲ್ಲಿ ಹಲವು ದಿನಗಳಿಂದ ಚಳಿ ಕಡಿಮೆಯಾಗಿದೆ ಹಾಗೂ ಶುಷ್ಕ ವಾತಾವರಣ (Karnataka Weather Forecast) ಆವರಿಸಿದೆ. ಬಿಸಿಲು ಏರುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರು (Bengaluru) ಬಿಸಿಲಿನ ಬೇಗೆಯಿಂದ (heat wave) ತತ್ತರಿಸಲಿದೆ ಎಂದು ಹವಾಮಾನ ಇಲಾಖೆ (IMD) ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಹಾಗೂ ತುಂತುರು ಮಳೆ ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ (Yellow alert) ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

Seasonal Flu: ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದ ಸೀಸನಲ್‌ ಫ್ಲೂ ಆತಂಕ; ಮಾರ್ಗಸೂಚಿ ಬಿಡುಗಡೆ

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.