Karnataka Weather: ಬಿಸಿಲಿನ ಬೇಗೆ ತಣಿಸಲು ಬರಲಿದೆ ಮಳೆ, ಹಲವೆಡೆ ಯೆಲ್ಲೋ ಅಲರ್ಟ್
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರ ಮಳೆಯಾಗಲಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಮಾತ್ರವಲ್ಲದೆ, ಪ್ರತಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಏ.24: ರಾಜ್ಯದಲ್ಲಿ ಸೂರ್ಯನ ತಾಪಮಾನ ಏರುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆ (Karnataka Weather forecast) ಅತ್ಯಂತ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬೆಂದು ಹೋಗಿದ್ದ ಕರ್ನಾಟಕದ (Karnataka) ಜನತೆಗೆ ವರುಣ ದೇವ ತಂಪೆರೆಯಲು (rain) ಸಜ್ಜಾಗಿದ್ದಾನೆ. ಆದರೆ, ಮಳೆಯೊಂದಿಗೆ ಆತಂಕಕಾರಿ ಗಾಳಿಯ ವೇಗವೂ ಇರಲಿದೆ ಎಂದು ಎಚ್ಚರಿಸಲಾಗಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರ ಮಳೆಯಾಗಲಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇವಲ ಮಳೆ ಮಾತ್ರವಲ್ಲದೆ, ಪ್ರತಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜನಸಾಮಾನ್ಯರು ಜಾಗರೂಕರಾಗಿರಲು ಸೂಚಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸಂಜೆ ವೇಳೆಗೆ ವರುಣನ ಆರ್ಭಟ ಜೋರಾಗಿರಲಿದೆ. ಮಲೆನಾಡಿನ ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದ್ದು, ಇಲ್ಲಿನ ಪ್ರವಾಸಿಗರು ಮತ್ತು ನಿವಾಸಿಗಳು ಎಚ್ಚರದಿಂದಿರಬೇಕು.
ಒಂದೆಡೆ ಉತ್ತರ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ರಾಜ್ಯದ ಕೆಲವು ಭಾಗಗಳಲ್ಲಿ ಒಣಹವೆ ಮತ್ತು ಬಿಸಿಲಿನ ಧಗೆ ಮುಂದುವರಿಯಲಿದೆ. ಪ್ರಕೃತಿಯ ಈ ವೈಪರೀತ್ಯ ಜನರನ್ನು ಕಂಗಾಲಾಗಿಸಿದೆ. ಸಂಜೆ ವೇಳೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ವಾಹನ ಸವಾರರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.
Karnataka Weather: ರಾಜ್ಯಾದ್ಯಂತ ಸುಡು ಬಿಸಿಲು, ಕೆಲವೆಡೆ ಬಿಸಿಗಾಳಿ, ಹೊರಗೆ ತೆರಳುವಾಗ ಎಚ್ಚರ
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ತಾಪಮಾನ ಏರಿಕೆಯಾಗುವ ಲಕ್ಷಣಗಳಿದ್ದು, ಸಂಜೆ ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಏಪ್ರಿಲ್ 25 ಅಥವಾ 26ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸೂಚನೆಗಳಿವೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಏರಿಕೆಯ ತಾಪಮಾನ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಏಪ್ರಿಲ್ 25ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬಿಸಿಲು ಹಾಗೂ ಅಧಿಕ ತಾಪಮಾನದೊಂದಿಗೆ ಮೈಸೂರು ಹಾಗೂ ಚಾಮರಾಜನಗರದ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಪ್ರತ್ಯಾವರ್ತ ಮಾರುತಗಳು ಮುಂದುವರಿದಿದ್ದು, ಎಪ್ರಿಲ್ ಕೊನೆಯಲ್ಲಿ ಹಾಗೂ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.
Heat Stroke: ಹೀಟ್ ಸ್ಟ್ರೋಕ್‌ಗೆ ರಾಜ್ಯದಲ್ಲಿ ಎರಡನೇ ಬಲಿ, ಬೆಳಗಾವಿಯಲ್ಲಿ ಅಧಿಕಾರಿ ಸಾವು