ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲಿನ ಜುಗ‌ಲ್‌ಬಂದಿ

ಕರ್ನಾಟಕ ಹವಾಮಾನ ಡಿಸೆಂಬರ್‌ 19, 2025: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು

ಸಾಂದರ್ಭಿಕ ಚಿತ್ರ -

Ramesh B
Ramesh B Dec 19, 2025 6:00 AM

ಬೆಂಗಳೂರು, ಡಿ. 19: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ 14°C ಹಾಗೂ 28°C ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather) ಮಾಹಿತಿ ನೀಡಿದೆ. ಶುಕ್ರವಾರ (ಡಿಸೆಂಬರ್‌ 19) ಮಳೆ ಸುರಿಯುವ ಸಾಧ್ಯತೆ ಇಲ್ಲ.

ಮುಂದಿನ 5 ದಿನಗಳವರೆಗೆ ಕರಾವಳಿಯಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ. ಗುರುವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಧಾರವಾಡದಲ್ಲಿ 10°C ದಾಖಲಾಗಿದೆ.

ಬೀದರ್‌, ಧಾರವಾಡ, ವಿಜಯಪುರ, ಗದಗ, ರಾಯಚೂರು ಮತ್ತು ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ದಾವಣಗೆರೆ ಮತ್ತು ಚಿಂತಾಮಣಿಯಲ್ಲಿ ಕನಿಷ್ಠ ತಾಪಮಾನ 10°C-15°C ವ್ಯಾಪ್ತಿಯಲ್ಲಿತ್ತು. ಆಗುಂಬೆ, ಬೆಂಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಒಳನಾಡಿನ ಶಿವಮೊಗ್ಗ, ಕರಾವಳಿಯಲ್ಲಿ 21°C-23°C ತಾಪಮಾನ ದಾಖಲಾಯಿತು. ಉತ್ತರ ಒಳನಾಡಿನ ಬೀದರ್‌ ಮತ್ತು ದಕ್ಷಿಣ ಒಳನಾಡಿನ ಹಾಸನದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾತ್ರಿ ಗಡಗಡ ಚಳಿ, ಹಗಲು ಚುರುಚುರು ಬಿಸಿಲು; ವಿಜಯಪುರದಲ್ಲಿ ದಾಖಲಾಯ್ತು 7 ಡಿಗ್ರಿ ತಾಪಮಾನ

ಮುನ್ನೆಚ್ಚರಿಕೆ ಕ್ರಮ

  • ರಾಜ್ಯಾದ್ಯಂತ ಚಳಿಯ ವಾತಾವರಣವೂ ಮುಂದುವರಿಯುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
  • ಶೀತ ಗಾಳಿಗೆ ಒಡ್ಡಿಕೊಂಡಾಗ ದೇಹದ ಭಾಗಗಳು ಮರಗಟ್ಟುವುದು ಸಾಮಾನ್ಯ. ಹೀಗಾಗಿ ಈ ಬಗ್ಗೆ ಗಮನ ಹರಿಸಿ.
  • ಶೀತ ಗಾಳಿಯ ಕಾರಣದಿಂದ ಚರ್ಮವು ಹಳದಿಯಾಗಿ ಕೆಂಪು ಗುಳ್ಳೆ ಕಾನಿಸಿಕೊಳ್ಳಬಹುದು. ಆದ್ದರಿಂದ ದೇಹವನು ಶೀತ ಗಾಳಿಗೆ ಒಡ್ಡಿಕೊಳ್ಳಬೇಡಿ.
  • ದೇಹದಲ್ಲಿ ಉಷ್ಣಾಂಶ ಕಡಿಮೆಯಾಗಿ ನಡುಕ, ಮಾತನಾಡಲು ತೊಂದರೆ, ನಿದ್ರಾಹೀನತೆ, ಸ್ನಾಯುಗಳಲ್ಲಿ ಬಿಗಿತ, ಉಸಿರಾಟದ ತೊಂದರೆ ಉಂಟಾಗಬಹುದು. ಹೀಗಾದಲ್ಲಿ ತಕ್ಷಣ ವೈದ್ಯರ ಸಹಾಯ ಪಡೆಯಿರಿ.
  • ದೇಹದ ಉಷ್ಣತೆ ಕಾಪಾಡಲು ತಲೆ, ಕುತ್ತಿಗೆ, ಬೆರಳು ಮತ್ತು ಕಾಲ್ಬೆರಳು ಮುಚ್ಚಿಕೊಳ್ಳಿ. ಇದಕ್ಕಾಗಿ ಗ್ಲೌಸ್, ಕ್ಯಾಪ್‌, ಮಫ್ಲರ್‌, ಶೂ ಬಳಸಿ.
  • ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಾಕಷ್ಟು ಪ್ರಮಾಣದಲ್ಲಿ ಪೋಷಕಾಂಶಗಳಿಂದ ಕೂಡಿದ ಆಹಾರ ಸೇವಿಸಿ ಮತ್ತು ವಿಟಮಿನ್‌ ಸಿ ಸಮೃದ್ಧವಾಗಿರುವ ಹಣ್ಣು ಹಾಗೂ ತರಕಾರಿ ಸೇವಿಸಿ.

ಡಿಸೆಂಬರ್ 13ರಂದು ತಾಪಮಾನ ಕೇವಲ 7 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು. ಡಿ. 16ರಂದು ಕನಿಷ್ಠ 10.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಯಿತು. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳದಂತೆ ತಜ್ಞರು ಸಲಹೆ ನೀಡಿದ್ದಾರೆ.