Karnataka Weather: ನೈಋತ್ಯ ಮಾನ್ಸೂನ್ ಚುರುಕು; ಕರಾವಳಿ, ಬೆಂಗಳೂರಿನಲ್ಲಿ ಇಂದೂ ಸುರಿಯಲಿದೆ ಮಳೆ
Bengaluru Rains: ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ, ಬೆಂಗಳೂರು ಸೇರಿ ವಿವಿಧೆಡೆ ಮತ್ತೆ ಮಳೆ ಅಬ್ಬರಿಸುತ್ತಿದೆ. ಬುಧವಾರವೂ ಮಳೆ ಮುಂದುವರಿಯಲಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಆ. 26: ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ, ಬೆಂಗಳೂರು ಸೇರಿ ವಿವಿಧೆಡೆ ಮತ್ತೆ ಮಳೆ ಅಬ್ಬರಿಸುತ್ತಿದೆ. ಮಂಗಳವಾರ ದಕ್ಷಿಣ ಕನ್ನಡ, ಬೆಂಗಳೂರು ಸೇರಿ ವಿವಿಧೆಡೆ ಧಾರಾಕಾರವಾಗಿ ಸುರಿದ ಮಳೆ ಬುಧವಾರವೂ (ಆಗಸ್ಟ್ 26) ಮುಂದುವರಿಯಲಿದೆ (Karnataka Weather). ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ (Bengaluru Rains). ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 28°C ಇರಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 35-45 ಕಿ.ಮೀ. ವೇಗದಲ್ಲಿ ಗಾಳಿ, ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ, ಸಾಧಾರಣ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ವರ್ಷಧಾರೆಯಾಗಲಿದೆ.
KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ; ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ CID ನೋಟೀಸ್!
ಆಗಸ್ಟ್ 27ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ/ಲಘು ಮಳೆಯಾಗುವ ಸಾಧ್ಯತೆ ಇದೆ.
ಸುಬ್ರಹ್ಮಣ್ಯದಲ್ಲಿ ತುಂಬಿ ಹರಿದ ಕುಮಾರಧಾರ:
Flood like situation over Kukke SUBRAMNYA - Karnataka Due to Incessant downpour from the morning. #Karnatakarains #Kukkesubramnya pic.twitter.com/pDNy3fCbIQ
— Gummalla Lakshmana (@GUMMALLALAKSHM3) August 25, 2026
ಸುಬ್ರಹ್ಮಣ್ಯದಲ್ಲಿ ಮೇರೆ ಮೀರಿ ಹರಿದ ಕುಮಾರಧಾರ
ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪವಿತ್ರ ಧಾರ್ಮಿಕ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ಮೇರೆ ಮೀರಿ ಹರಿದಿದೆ. ಮಂಗಳವಾರ ಆದಿ ಸುಬ್ರಹ್ಮಣ್ಯದ ಹೊರಾಂಗಣ ಸಂಪೂರ್ಣ ಜಲಾವೃತಗೊಂಡಿತು. ಸದ್ಯ ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.