ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೇ...; ಮತ್ತೆ ಮಂಕಾದ ಮುಂಗಾರು: ತಲೆ ಮೇಲೆ ಕೈ ಹೊತ್ತು ಕುಳಿತ ರೈತ

Karnataka Weather: ಗುರುವಾರ (ಜುಲೈ 16) ಕೂಡ ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರಿಯಲಿದ್ದು, 3 ಜಿಲ್ಲೆಗಳಲ್ಲಿ ಮಾತ್ರ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತೆ ಮಂಕಾದ ಮುಂಗಾರು; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Jul 16, 2026 6:00 AM

ಬೆಂಗಳೂರು, ಜು. 16: ನಿರೀಕ್ಷೆಯಂತೆಯೇ ಎಲ್‌ ನಿನೋ ಭಾರತದಲ್ಲಿ ಪ್ರಭಾವ ಬೀರ ತೊಡಗಿದೆ. ದೇಶಾದ್ಯಂತ ಮಳೆ ಕೊರತೆ ಎದುರಾಗಿದ್ದು, ರಾಜ್ಯದಲ್ಲೂ ಸುಡು ಬಿಸಿಲಿನ ವಾತಾವರಣ ಕಂಡು ಬರುತ್ತಿದೆ. ರಾಜ್ಯದ ಕೆಲವು ಕಡೆ ಆಗೊಮ್ಮೆ-ಈಗೊಮ್ಮೆ ಮಳೆಯಾಗುವುದು ಬಿಟ್ಟರೆ ಪ್ರತಿ ವರ್ಷದ ಅಬ್ಬರದ ನಳೆ ಕಣ್ಮರೆಯಾಗಿದೆ (Karnataka Weather). ಗುರುವಾರ (ಜುಲೈ 16) ಕೂಡ ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರಿಯಲಿದ್ದು, 3 ಜಿಲ್ಲೆಗಳಲ್ಲಿ ಮಾತ್ರ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಶುಭ್ರ ಆಕಾಶ ಕಂಡು ಬರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ಉಷ್ಣಾಂಶ 20°C ಹಾಗೂ 33°C ಇರಲಿದೆ. ಕರಾವಳಿ ಕರ್ನಾಟಕದಾದ್ಯಂತ ಬಿಸಿ ವಾತಾವರಣ ಕಂಡು ಬರಲಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಲ್ಲಿ ಗರಿಷ್ಟ ತಾಪಮಾನ 5 ಡಿಗ್ರಿ ಸೆಲ್ಸಿಯಸ್‌ ಅಧಿಕವಾಗಲಿದೆ.

ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ?

ಗುರುವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಹಗರ ಮಳೆ ಸುರಿಯಲಿದೆ. ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಕಂಡು ಬರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆ ಸುರಿಯಲಿದೆ. ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಾಲಿ ಬೀಸುವ ಸಾಧ್ಯತೆ ಇದೆ.

ದಾಖಲೆ ಬರೆಯಲಿರುವ ಎಲ್ ನಿನೋ? ಭಾರತದಲ್ಲಿ ಮಳೆ ಕೊರತೆ ಹೆಚ್ಚುವ ಸಾಧ್ಯತೆ

ಜುಲೈ 17ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಬಾಗಲಕೋಟೆ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಾಳಿ ಬೀಸಲಿದ್ದು, ಮಳೆ ಸುರಿಯುವ ಲಕ್ಷಣ ಇಲ್ಲ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು, ಮೈಸೂರು ಮತ್ತು ಚಾನರಾಜನಗರ ಜಿಲ್ಲೆಗಳ ಕೆಲವೆಡೆ ತುಂತುರು ಮಳೆ ಸುರಿಯಲಿದೆ. ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಜೋರಾಗಿ ಗಾಳಿ ಬೀಸಲಿದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.