ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Milk price hike: ರಾಜ್ಯದ ಜನತೆಗೆ ಬಿಗ್‌ ಶಾಕ್‌! ಹಾಲಿನ ದರದಲ್ಲಿ ಮತ್ತೆ ಏರಿಕೆ?

Nandini Price hike: ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ.ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ.

ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ?

Profile Rakshita Karkera May 18, 2025 9:19 AM

ಬೆಂಗಳೂರು: ಬೆಲೆ ಏರಿಕೆ ಬಿಸಿ ನಡುವೆಯೇ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಕಾದಿದೆ. ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ.ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ತಿಂಗಳು ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ ಮಾಡಿತ್ತು. ಇದೇ ತಿಂಗಳ 21ಕ್ಕೆ ಈಗಿನ ಕೆಎಂಎಫ್ (KMF) ಆಡಳಿತ ಮಂಡಳಿಯ ಅವಧಿ ಮುಕ್ತಾಯವಾಗಲಿದೆ. ಅದರ ಬೆನ್ನಲ್ಲೇ ಇದೇ 25ಕ್ಕೆ ಹೊಸ ನಿರ್ದೇಶಕರ ಆಯ್ಕೆ ಆಗಲಿದೆ. ಹೊಸ ಆಡಳಿತ ಮಂಡಳಿ ರಚನೆಯಾದ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರದ ಮುಂದೆ ಮತ್ತೆ ದರ ಹೆಚ್ಚಳ ಪ್ರಸ್ತಾವನೆ ಸಲ್ಲಿಸಲು ಚರ್ಚೆ ನಡೆಯುತ್ತಿದೆ.

ಈ ಕುರಿತು ಕಾಂಗ್ರೆಸ್ ಶಾಸಕ ಬಾಲಕೃಷ್ಣ ಸುಳಿವು ನೀಡಿದ್ದಾರೆ. ಬಮುಲ್‌ನ 18 ಸ್ಥಾನಗಳ ನಿರ್ದೇಶಕರ ಚುನಾವಣೆಯಲ್ಲಿ ಕನಕಪುರ ತಾಲೂಕು ನಿರ್ದೇಶಕ ಸ್ಥಾನಕ್ಕೆ ಡಿಕೆ ಸುರೇಶ್ ಸ್ಪರ್ಧೆ ಮಾಡುತ್ತಿದ್ದಾರೆ. ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ. ಕಳೆದ ತಿಂಗಳು ಕರ್ನಾಟಕದ ಕೆಎಂಎಫ್ ನಂದಿನಿ ಹಾಲಿನ ದರ ಹಾಗೂ ಮದರ್ ಡೈರಿ ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಿದ ಬೆನ್ನಲ್ಲೇ ದೇಶದ ಇನ್ನೊಂದು ಜನಪ್ರಿಯ ಡೈರಿ ಬ್ರಾಂಡ್ ಅಮುಲ್ ಹಾಲಿನ ದರ ಕೂಡ ಎರಡು ರೂಪಾಯಿ ಹೆಚ್ಚಳ ಮಾಡಿತ್ತು. ಪರಿಷ್ಕೃತ ದರ ಮೇ 1ರಿಂದಲೇ ಜಾರಿಗೆ ಬಂದಿತ್ತು ಎಂದು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ತಿಳಿಸಿತ್ತು.

ಈ ಸುದ್ದಿಯನ್ನೂ ಓದಿ: KMF Nandini IPL: ಐಪಿಎಲ್‌ ಪ್ರವೇಶಕ್ಕೆ ಮುಂದಾದ 'ನಂದಿನಿ'; ಈ ತಂಡಕ್ಕೆ ಪ್ರಾಯೋಜಕತ್ವ ಸಾಧ್ಯತೆ

ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಎನ್​ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಮತ್ತು ಅಮುಲ್ ಕೌ ಮಿಲ್ಕ್​​ಗಳಿಗೆ ಅನ್ವಯವಾಗುತ್ತದೆ. ಕಳೆದ ವರ್ಷವಷ್ಟೇ ಗ್ರಾಹಕರಿಗೆ ರಿಲೀಫ್ ನೀಡಲು ಅಮುಲ್ ಸುಮಾರು ಐದು ತಿಂಗಳ ಕಾಲ 1 ಲೀಟರ್ ಮತ್ತು 2 ಲೀಟರ್ ಹಾಲಿನ ಪ್ಯಾಕ್‌ಗಳಲ್ಲಿ ಕ್ರಮವಾಗಿ 50 ಮಿಲಿ ಮತ್ತು 100 ಮಿಲಿ ಹೆಚ್ಚುವರಿ ಹಾಲನ್ನು ಉಚಿತವಾಗಿ ನೀಡಿತ್ತು. ಇದಲ್ಲದೆ, 2025ರ ಜನವರಿಯಲ್ಲಿ, 1 ಲೀಟರ್ ಪ್ಯಾಕ್‌ನ ಬೆಲೆಯನ್ನು 1 ರೂ. ಕಡಿಮೆ ಮಾಡಿತ್ತು.