ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕುಶಾಲನಗರದಲ್ಲಿ ಘೋರ ಘಟನೆ; ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

Kushalnagar News: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

-

Prabhakara R
Prabhakara R Aug 7, 2026 8:29 PM

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ (Child Death). ಮೃತ ಮಗುವನ್ನು ಅಪೂರ್ವ ಎಂದು ಗುರುತಿಸಲಾಗಿದೆ.

ಈಕೆ ಸತೀಶ್ ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದು, ಈ ದುರ್ಘಟನೆ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಈ ದುರ್ಘಟನೆಯಿಂದ ಬಸವನಹಳ್ಳಿ ಹಾಡಿಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

Udupi shootout case: ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ!

ಮೈನಿಂಗ್‌ ಲಾರಿ ಹರಿದು ಇಬ್ಬರ ದುರ್ಮರಣ

ಬಳ್ಳಾರಿ: ಮೈನಿಂಗ್ ಲಾರಿ ಹರಿದು ಇಬ್ಬರು ಪಾದಚಾರಿಗಳು ಮೃತಪಟ್ಟಿರುವ ಘಟನೆ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ನಡೆದಿದೆ. ಹೊಸಪೇಟೆ ಮೂಲದ ಕುಮಾರ್ (34) ಹಾಗೂ ಮಂಜುನಾಥ (28) ಮೃತರು. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಹಿಂಬದಿಯಿಂದ ಬಂದ ಲಾರಿ ಇಬ್ಬರಿಗೂ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.