Elephant attack in Madikeri: ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು
Elephant attack: ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕಾಲೇಜು ಮುಗಿಸಿ ಸಂಜೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿಯಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪೂಜಾ. -
ಮಡಿಕೇರಿ: ಕಾಡಾನೆ ದಾಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಶನಿವಾರ ಸಂಜೆ ಮಡಿಕೇರಿ (Madikeri News) ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಮದೆ ಗ್ರಾಮ ಪಂಚಾಯಿತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ.
ಮಡಿಕೇರಿಯ ಸಂತ ಮೈಕೆಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತಿದ್ದ ಪೂಜಾ ನೆನ್ನೆ ಸಂಜೆ 5:30ಕ್ಕೆ ಕಾಲೇಜು ಮುಗಿಸಿ ಮತ್ತೆ ಬೆಟ್ಟತೂರಿಗೆ ಬಂದಿದ್ದಳು. ಬಸ್ಸಿನಿಂದಿಳಿದು ಮನೆಗೆ ಹೋಗುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಯುವತಿಯ ಶವವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆನೆ ದಾಳಿ ತಡೆಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ-ಮಾನವ ಸಂಘರ್ಷ ತಡೆಗೆ ಕ್ರಮ ಕೈಗೊಂಡು, ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಬ್ಲಾಸ್ಟ್: 17 ಮಂದಿ ಸಾವು, 18 ಜನರಿಗೆ ಗಾಯ
ಮಡಿಕೇರಿ ಡಿಎಫ್ಒ ಅಭಿಷೇಕ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಕಾಡಾನೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಮೃತಳ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರೂ ಪರಿಹಾರ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಶಿಗ್ಗಾಂವಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ದುರ್ಮರಣ

ಹಾವೇರಿ: ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವ್ಯಾಗನರ್ ಕಾರು ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ (Haveri Accident) ಶಿಗ್ಗಾಂವಿ ಸಮೀಪದ ಅಂಬುಜಾ ಪ್ಯಾಕ್ಟರಿ ಬಳಿ ನಡೆದಿದೆ. ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34), ಐಶ್ವರ್ಯ (30) ಮೃತ ದಂಪತಿ. ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ.
ಹಾವೇರಿಯ ಕೀರ್ತಿ ಹೂಗಾರ ಮತ್ತು ಶಿಗ್ಗಾಂವಿಯ ಐಶ್ವರ್ಯಗೆ ಕಳೆದ 15 ದಿನಗಳ ಹಿಂದೆ ವಿವಾಹವಾಗಿತ್ತು. ದೇವರ ದರ್ಶನ ಪಡೆದುಕೊಂಡು ಹಾವೇರಿಗೆ ಮರಳುವ ಸಮಯದಲ್ಲಿ ಈ ದುರ್ಘಟನೆ ಸಂಭವಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದೆ. ಅಗ್ನಿ ಶಾಮಕದವರು ಹಾಗೂ ಸ್ಥಳೀಯರು ಮೃತ ದೇಹಗಳನ್ನು ಹೊರತಗೆದಿದ್ದಾರೆ. ಸ್ಥಳಕ್ಕೆ ತಡಸ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ಕೊಟ್ಟು, ಪರಿಶೀಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.