ಡಿಸೆಂನರ್ʼನೊಳಗೆ ತಾಪಂ, ಜಿಪಂ ಚುನಾವಣೆ: ಡಿಕೆಶಿ
ನೀವೆಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಿಮ್ಮ ಶ್ರಮಕ್ಕೆ ತಕ್ಕಂತೆ ನಿಮಗೆ ಅಧಿಕಾರ ನೀಡಬೇಕು ಎನ್ನುವುದು ನಮ್ಮ ಆಸೆ. ಅಧಿಕಾರ ಹಂಚಿಕೆ ಯಾದಾಗ ಮಾತ್ರ ಎಲ್ಲ ಸರಕಾರಿ ಕೆಲಸ ಕಾರ್ಯಗಳಿಗೆ ವೇಗ ಸಿಗಲು ಸಾಧ್ಯ ಎಂದು ಕಾರ್ಯಕರ್ತ ರಲ್ಲಿ ಹುರುಪು ತುಂಬಿದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ‘ಭಾರತ್ ಜೋಡೋ ಯುವ ಘಟಕ’ಗಳನ್ನು ನಿರ್ಮಾಣ ಮಾಡಲಾಗು ವುದು. ಆ ಮೂಲಕ ಯುವಕರನ್ನು ಸಂಘಟಿಸಿ ಪಕ್ಷದ ಸಿದ್ಧಾಂತಗಳನ್ನು ತಲುಪಿಸಲಾಗುವುದು ಎಂದರು
-
ಮಡಿಕೇರಿ: ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ಒಳಗೆ ಮುಗಿಸಲಾಗುವುದು. ಚುನಾವಣೆ ಪ್ರಕ್ರಿಯೆ ವಿಳಂಬ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಇದನ್ನೂ ಓದಿ: By Elections: ಮೂರರಲ್ಲಿ ಎರಡು ಸ್ಥಾನ ಕಳೆದುಕೊಂಡ ಬಿಜೆಪಿ; ಜೆನ್ ಝೀ ಹೋರಾಟ ಕಮಲ ಪಡೆಗೆ ಎಚ್ಚರಿಕೆಯ ಕರೆಗಂಟೆಯಾಗುತ್ತ?
ಮಡಿಕೇರಿಯ ಐತಿಹಾಸಿಕ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವೆಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಿಮ್ಮ ಶ್ರಮಕ್ಕೆ ತಕ್ಕಂತೆ ನಿಮಗೆ ಅಧಿಕಾರ ನೀಡಬೇಕು ಎನ್ನುವುದು ನಮ್ಮ ಆಸೆ. ಅಧಿಕಾರ ಹಂಚಿಕೆ ಯಾದಾಗ ಮಾತ್ರ ಎಲ್ಲ ಸರಕಾರಿ ಕೆಲಸ ಕಾರ್ಯಗಳಿಗೆ ವೇಗ ಸಿಗಲು ಸಾಧ್ಯ ಎಂದು ಕಾರ್ಯಕರ್ತ ರಲ್ಲಿ ಹುರುಪು ತುಂಬಿ ದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ‘ಭಾರತ್ ಜೋಡೋ ಯುವ ಘಟಕ’ಗಳನ್ನು ನಿರ್ಮಾಣ ಮಾಡಲಾಗುವುದು. ಆ ಮೂಲಕ ಯುವಕರನ್ನು ಸಂಘಟಿಸಿ ಪಕ್ಷದ ಸಿದ್ಧಾಂತಗಳನ್ನು ತಲುಪಿಸಲಾಗುವುದು ಎಂದರು.
10 ಲಕ್ಷ ರು. ವಿಶೇಷ ಅನುದಾನ: ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಪ್ರತೀ ಗ್ರಾಮ ಪಂಚಾಯಿತಿಗೆ 10 ಲಕ್ಷ ರು. ಗಳ ವಿಶೇಷ ಅನುದಾನ ನೀಡಲಿದ್ದೇವೆ. ಈ ಹಣವನ್ನು ಸ್ಥಳೀಯವಾಗಿ ಅಗತ್ಯವಿರುವ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬಹುದು ಎಂದು ಸಿಎಂ ಡಿಕೆಶಿ ಮಾಹಿತಿ ನೀಡಿದರು