ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kodi Mutt Swamiji Predictions: ಸಿಎಂ ಸಿದ್ದರಾಮಯ್ಯ ಸರಕಾರದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ

CM Siddaramaiah: ದಸರಾದ ನಿಜವಾದ ಅರ್ಥವೆಂದರೇ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರಕಾರದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ

-

ಹರೀಶ್‌ ಕೇರ ಹರೀಶ್‌ ಕೇರ Oct 2, 2025 1:30 PM

ಧಾರವಾಡ: ತಮ್ಮ ಭವಿಷ್ಯವಾಣಿಗಳಿಂದ ಪ್ರಸಿದ್ಧರಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಸಿಎಂ ಸಿದ್ಧರಾಮಯ್ಯ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ್ದಾರೆ. ಇಂದು ದಸರಾ ಹಬ್ಬದ ಪ್ರಯುಕ್ತ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಇಲ್ಲ. ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ದಸರಾದ ಸಂದೇಶ ನೀಡಿದರು. ದಸರಾದ ನಿಜವಾದ ಅರ್ಥವೆಂದರೇ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದರು. ನಾನು ಈ ಹಿಂದೆಯೇ ಹೇಳಿದ್ದೇನೆ. ಅದೇನೆಂದರೆ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂಬುದಾಗಿ. ಅದರಂತೆ ನಮ್ಮಲ್ಲೀಗ ಬಯಲು ಸೀಮೆ ಮಲೆನಾಡು ಆಗಿದೆ ಎಂಬುದಾಗಿ ಭವಿಷ್ಯ ನುಡಿದರು.

ಈ ವರ್ಷದ ಪೂರ್ವಾರ್ಧದಲ್ಲಿ ನುಡಿದಿದ್ದು ಭವಿಷ್ಯದಲ್ಲಿ ಅವರು ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸುವ ಸಾಧ್ಯತೆ ಇದ್ದು, ಮತೀಯ ಗಲಭೆಗಳು ಹೆಚ್ಚಾಗಲಿವೆ ಎಂದು ಎಚ್ಚರಿಸಿದ್ದರು.

ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ.‌ ಅರಸನ ಅರಮನೆಗೆ ಕಾರ್ಮೋಡ ಕವಿದಿದೆ. ಅನೇಕ ರಾಜಕೀಯ ಮುಖಂಡರಿಗೆ ಸಾವು, ನೋವು ಹಾಗೂ ಜೀವ ಭಯವಿದೆ ಎಂದು ಸ್ವಾಮೀಜಿ ಹೇಳಿದ್ದರು.

ಇದನ್ನೂ ಓದಿ: Kodi Mutt Swamiji: ಮಲೆನಾಡು ಬಯಲುಸೀಮೆಯಾಗುತ್ತೆ, ಬಯಲುಸೀಮೆ ಮಲೆನಾಡಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ