Karnataka Weather: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಶುರು; ಮುಂದಿನ 4 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಕರ್ನಾಟಕ ಹವಾಮಾನ ವರದಿ: ಅಕ್ಟೋಬರ್ 21 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

-

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ (ಈಶಾನ್ಯ ಮಾನ್ಸೂನ್) ಅಬ್ಬರ ಶುರುವಾಗಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಇದೇ ರೀತಿ ಮುಂದಿನ ನಾಲ್ಕು ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಲ್ಲಿ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (India Meteorological Department) ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಅಕ್ಟೋಬರ್ 21 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 21 ° C ಆಗಿರಬಹುದು.
ಅ.19ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಎಚ್ಚರಿಕೆವಹಿಸಿ
— Karnataka State Natural Disaster Monitoring Centre (@KarnatakaSNDMC) October 18, 2025
Next 5 days #Rainfall #Forecast maps for the #Karnataka state with district-wise warnings.
Source: IMD Bengaluru@KarnatakaVarthe #KarnatakaRains pic.twitter.com/vAa4ucrOvI
ಅ.20ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅ. 21ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅ.22ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Star Monsoon Fashion 2025: ನಟಿ ಮೌನ ಗುಡ್ಡೆಮನೆ ಮಾನ್ಸೂನ್ ಟ್ರಾವೆಲ್ ಫ್ಯಾಷನ್ ಝಲಕ್
ಅ. 23 ಮತ್ತು 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.