ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

SSLC Exam: ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಬೆಡ್‌ ಮೇಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ಇತ್ತೀಚಿಗಷ್ಟೇ ಅಪಘಾತದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಕುಸುಮ ಕಾಲು ಕಳೆದುಕೊಂಡಿದ್ದಳು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ತಾಯಿ ಜೊತೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ಆಸ್ಪತ್ರೆಯಿಂದ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಬೆಡ್‌ ಮೇಲೆಯೇ ಪರೀಕ್ಷೆ ಬರೆದಿದ್ದಾಳೆ.

ಕಾಲು ಮುರಿದರೂ ಸ್ಟ್ರೆಚರ್‌ ಬೆಡ್‌ ಮೇಲೇ ಎ‌ಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಳು!

ವಿದ್ಯಾರ್ಥಿನಿ ಕುಸುಮಾ -

ಹರೀಶ್‌ ಕೇರ
ಹರೀಶ್‌ ಕೇರ Mar 18, 2026 12:02 PM

ಕೋಲಾರ, ಮಾ.18: ರಾಜ್ಯಾದ್ಯಂತ ಇಂದು 10ನೇ ತರಗತಿ ಪರೀಕ್ಷೆಗಳು ಆರಂಭವಾಗಿದ್ದು, ಕೋಲಾರ (Kolar news) ಜಿಲ್ಲೆಯ ಕೆಜಿಎಫ್ (KGF) ತಾಲೂಕಿನ ಸೆಂಟ್ ಜೋಸೆಫ್ ಶಾಲೆಯಲ್ಲಿ ವಿದ್ಯಾರ್ಥಿನಿ (Student) ಒಬ್ಬಳು ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಬೆಡ್‌ ಮೇಲೆ ಪರೀಕ್ಷೆ (SSLC Exam) ಬರೆದಿರುವ ಘಟನೆ ವರದಿಯಾಗಿದೆ.

ಕೆಜಿಎಫ್ ತಾಲೂಕಿನ ಚಿನ್ನಗನಹಳ್ಳಿ ನಿವಾಸಿ ಆಗಿರುವ ವಿದ್ಯಾರ್ಥಿನಿ ಕುಸುಮ ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿದ್ದಾಳೆ. ಇತ್ತೀಚಿಗಷ್ಟೇ ಅಪಘಾತದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಕುಸುಮ ಕಾಲು ಕಳೆದುಕೊಂಡಿದ್ದಳು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ತಾಯಿ ಜೊತೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ವಿದ್ಯಾರ್ಥಿನಿಗೆ ಬಿಇಒ ಅನುಮತಿ ಕೊಟ್ಟಿದ್ದಾರೆ. ಆಸ್ಪತ್ರೆಯಿಂದ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಬೆಡ್‌ ಮೇಲೆಯೇ ಪರೀಕ್ಷೆ ಬರೆದಿದ್ದಾಳೆ. ಈಕೆಯ ದಿಟ್ಟತನವನ್ನು ಸಹಪಾಠಿಗಳು, ಶಿಕ್ಷಕರು ಮೆಚ್ಚಿಕೊಂಡರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಕರ್ನಾಟಕದಲ್ಲಿ ಈ ವರ್ಷದ SSLC ಪರೀಕ್ಷೆ 2026 ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ರಾಜ್ಯದಾದ್ಯಂತ ವಿದ್ಯಾರ್ಥಿಗಳು ತಮ್ಮ ಭವಿಷ್ಯ ನಿರ್ಧರಿಸುವ ಮಹತ್ವದ ಪರೀಕ್ಷೆಯನ್ನು ಬರೆಯಲು ಪರೀಕ್ಷಾ ಕೇಂದ್ರಗಳತ್ತ ತೆರಳಿದ್ದಾರೆ. ಈ ಪರೀಕ್ಷೆಗಳು ಏಪ್ರಿಲ್ 2ರವರೆಗೆ ನಡೆಯಲಿವೆ. ಈ ಬಾರಿ ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 4,44,172 ಬಾಲಕರು ಹಾಗೂ 4,21,816 ಬಾಲಕಿಯರು ಇದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯದಾದ್ಯಂತ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

SSLC Exam: ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ಪರೀಕ್ಷೆಗಳು ಪ್ರಥಮ ಭಾಷಾ ವಿಷಯದಿಂದ ಆರಂಭವಾಗಿವೆ. ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು ಮತ್ತು ತಮಿಳು ಸೇರಿದಂತೆ ಹಲವು ಭಾಷಾ ವಿಷಯಗಳಿಂದ ಪರೀಕ್ಷಾ ಪ್ರಕ್ರಿಯೆ ಆರಂಭವಾಗಿದೆ. ಪರೀಕ್ಷಾ ಪ್ರಕ್ರಿಯೆ ಸುಗಮವಾಗಿ ನಡೆಯಲು ರಾಜ್ಯ ಸರ್ಕಾರ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಹಲವು ಕ್ರಮಗಳನ್ನು ಕೈಗೊಂಡಿವೆ. ಎಲ್ಲಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.