2027ರೊಳಗೆ ಸಿಕೆ ವ್ಯಾಲಿಗೆ ಎತ್ತಿನಹೊಳೆ ನೀರು: ಡಿಕೆಶಿ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆ ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಲೇವಡಿ ಮಾಡುತ್ತಿದ್ದಾರೆ. ಯಾವುದೂ ಸುಲಭವಾಗಿ ಸಿಗುವುದಿಲ್ಲ. ಈ ಯೋಜನೆ ಕಷ್ಟ ವಾಗಿದೆ. ಆದರೆ ಪ್ರಯತ್ನ ಮಾಡಬೇಕಲ್ಲವೇ? ಪಶ್ಚಿಮ ಘಟ್ಟದಿಂದ ಹಾಸನದ ಮೂಲಕ ಕೋಲಾರ, ಚಿಕ್ಕಬಳ್ಳಾ ಪುರ ಕೆರೆಗಳನ್ನು ತುಂಬಿಸಲಾಗುವುದು.
-
ಮಾಲೂರಿನಲ್ಲಿ ಸರಕಾರದ ಸಾಧನೆ ಸಂಭ್ರಮ
ಮಾಲೂರು: ಕಾಂಗ್ರೆಸ್ ಸರಕಾರ 5 ಗ್ಯಾರಂಟಿ ಯೋಜನೆಗಳ ಜತೆಗೆ 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಹಾಗೂ 7ನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಈ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರಕಾರ ಸಂಕಲ್ಪ ಮಾಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆ ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಲೇವಡಿ ಮಾಡುತ್ತಿದ್ದಾರೆ. ಯಾವುದೂ ಸುಲಭವಾಗಿ ಸಿಗುವುದಿಲ್ಲ. ಈ ಯೋಜನೆ ಕಷ್ಟವಾಗಿದೆ. ಆದರೆ ಪ್ರಯತ್ನ ಮಾಡಬೇಕಲ್ಲವೇ? ಪಶ್ಚಿಮ ಘಟ್ಟದಿಂದ ಹಾಸನದ ಮೂಲಕ ಕೋಲಾರ, ಚಿಕ್ಕಬಳ್ಳಾ ಪುರ ಕೆರೆಗಳನ್ನು ತುಂಬಿಸಲಾಗುವುದು. ತುಮಕೂರಿನವರೆಗೂ ನೀರು ತರುವ ಪ್ರಯತ್ನ ಮಾಡಲಾಗಿದೆ. ಈಗಾಗಲೇ ಕೆ.ಸಿ. ವ್ಯಾಲಿ ಯೋಜನೆ ಮೂಲಕ 1004 ಕೆರೆಗಳಿಗೆ ನೀರು ತುಂಬಿಸಲಾಗಿದೆ. ಎಚ್.ಎನ್.ವ್ಯಾಲಿಯ 65 ಕೆರೆ ತುಂಬಿಸಲಾಗುತ್ತಿದೆ ಎಂದರು.
![]()
ಅಧಿಕಾರ ಶಕ್ತಿ ಸಂಕೇತವಲ್ಲ, ಜವಾಬ್ದಾರಿಯ ಸಂಕೇತ. ನಾವು ಅಧಿಕಾರವನ್ನು ಸಿಂಹಾಸನವೆಂದು ತಿಳಿದಿಲ್ಲ, ಜನಸೇವೆಗೆ ಸಿಕ್ಕಿರುವ ಅವಕಾಶ ಎಂದು ಭಾವಿಸಿದ್ದೇವೆ. ಮೂರ್ತಿಗೆ ಬೆಲೆಕಟ್ಟಬಹುದು, ದೇವರಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ದೇವರು. ನಮಗೆ ಆಶೀರ್ವಾದ ಮಾಡಿ ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಿದ್ದೀರಿ, ನಿಮಗೆ ಧನ್ಯವಾದಗಳು.
-ಡಿ.ಕೆ.ಶಿವಕುಮಾರ್, ಸಿಎಂ