ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ತುಂಗಭದ್ರಾ ಡ್ಯಾಂನಿಂದ 1.20 ಲಕ್ಷ ಕ್ಯುಸೆಕ್ ನೀರು ಬಿಡುಗಡೆ; ಸೇತುವೆ ಮುಳುಗಿ ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Tungabhadra dam: ರಾಜ್ಯದ ನಾಲ್ಕು ಜಿಲ್ಲೆಗಳ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ನದಿ ಧುಮ್ಮಿಕ್ಕಿ ಹರಿಯುವ ದೃಶ್ಯ ವೈಭವ ನೋಡುಗರನ್ನು ಸೆಳೆಯುತ್ತಿದೆ.

ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಿದ ಕಂಪ್ಲಿ-ಗಂಗಾವತಿ ಸೇತುವೆ

Prabhakara R Prabhakara R Jul 28, 2025 5:24 PM

ಕೊಪ್ಪಳ: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ (Karnataka Rains) ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಅದೇ ರೀತಿ ರಾಜ್ಯದ ನಾಲ್ಕು ಜಿಲ್ಲೆಗಳ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ (Tungabhadra dam) 1.20 ಲಕ್ಷ ಕ್ಯುಸೆಕ್ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ನದಿ ಧುಮ್ಮಿಕ್ಕಿ ಹರಿಯುವ ದೃಶ್ಯ ವೈಭವ ನೋಡುಗರನ್ನು ಸೆಳೆಯುತ್ತಿದೆ. ಇನ್ನು ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾದ ಪರಿಣಾಮ ವಿಶ್ವವಿಖ್ಯಾತ ಹಂಪಿ ಶ್ರೀ ಕೋದಂಡ ರಾಮದೇವರ ದೇಗುಲದ ಆವರಣಕ್ಕೆ ನೀರು ಬಂದಿದ್ದು, ದೇಗುಲದ ಮೆಟ್ಟಿಲುಗಳು ಮುಳುಗಡೆ ಆಗಿವೆ.

_ Kampli-Gangavathi Bridge

ಕಂಪ್ಲಿ ಪಟ್ಟಣದ ತುಂಗಭದ್ರಾ ನದಿ ತೀರದಲ್ಲಿನ ಶ್ರೀಆಂಜನೇಯ ಸ್ವಾಮಿ ದೇಗುಲ ಜಲಾವೃತವಾಗಿದ್ದು, ದೇಗುಲದ ಗರ್ಭಗುಡಿಗೆ ನೀರು ನುಗ್ಗಿದೆ. ಹಾಗೆಯೇ ಬಳ್ಳಾರಿ ಜಿಲ್ಲೆಯ ಕಂಪ್ಲಿ-ಗಂಗಾವತಿ ಸೇತುವೆ (Kampli-Gangavathi Bridge) ಸಂಪರ್ಕ ಕಡಿತವಾಗಿದೆ. ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಯಾಗಿದ್ದರಿಂದ ನಿತ್ಯ ಗಂಗಾವತಿ ನಗರಕ್ಕೆ ತೆರಳುವ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಹೋಗುವ ರೋಗಿಗಳು, ವಾಣಿಜ್ಯ ವ್ಯವಹಾರಗಳಿಗೆ ತೆರಳುವವರು ವಿಜಯನಗರ ಜಿಲ್ಲೆಯ ಬುಕ್ಕಸಾಗರ ಗ್ರಾಮದ ಬಳಿಯ ಕಡೆಬಾಗಿಲು ಸೇತುವೆ ಮೂಲಕ ಸುತ್ತು ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಉಂಟಾಗಿದೆ.



ಸೇತುವೆ ಬಳಿ ಜನರ ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ವ್ಯವಸ್ಥೆ ಮಾಡಿದ್ದು, ಪೊಲೀಸ್ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ. ಕಲ್ಯಾಣ, ಉತ್ತರ ಮತ್ತು ಮಧ್ಯ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶಕ್ಕೆ ತೆರಳುವ ಪ್ರಯಾಣಿಕರು ಪ್ರಸ್ತುತ ಸಂಪರ್ಕ ಕಡಿತದಿಂದ ಪರದಾಡುವ ಪರಿಸ್ಥಿತಿ ಇದೆ.

Rain News (98)

ಕಂಪ್ಲಿ-ಸಿರುಗುಪ್ಪ ಹೆದ್ದಾರಿಯ ನಾರಿಹಳ್ಳ ಸೇತುವೆಗೆ ನದಿ ಹಿನ್ನೀರು ನುಗ್ಗುವ ಸಂಭವ ಇದ್ದು, ರಸ್ತೆ ಸಂಚಾರ ಸ್ಥಗಿತಗೊಳ್ಳುವ ನಿರೀಕ್ಷೆಯೂ ಇದೆ. ನದಿ ಪಾತ್ರದಲ್ಲಿ ಅಳವಡಿಸಿರುವ ನೂರಾರು ಪಂಪ್‌ಸೆಟ್‌ಗಳನ್ನು ರೈತರು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಹವಾಮಾನ ವರದಿ; ನಾಳೆ ಎಲ್ಲೆಲ್ಲಿ ಮಳೆಯಾಗಲಿದೆ?

ಬೆಂಗಳೂರು: ಜುಲೈ 29ರಂದು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಬೆಂಗಳೂರು, ಮೈಸೂರು, ಕೊಡಗು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬಿದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Bangaluru Weather: ಬೆಂಗಳೂರಿನ ವೆದರ್‌ ಫುಲ್‌ ಕೂಲ್‌, ಕೂಲ್‌; ರೋಗಕ್ಕೆ ತುತ್ತಾಗುತ್ತಿರುವ ಜನ

ಜುಲೈ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬಿದರ್, ಧಾರವಾಡ, ಗದಗ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.



ಜುಲೈ 31ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬಿದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 1ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬಿದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Heavy Rain: ರಾಜ್ಯಾದ್ಯಂತ ಭಾರೀ ಮಳೆ; ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್, ಹಲವೆಡೆ ಗುಡ್ಡ ಕುಸಿತ

ಜುಲೈ 2 ಮತ್ತು 3ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬಿದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.