Koppal News: ಕೊಪ್ಪಳದಲ್ಲಿ ಘೋರ ಘಟನೆ; ಪತ್ನಿ, ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಚಿನ್ನದ ವ್ಯಾಪಾರಿ
ಪ್ರಾಥಮಿಕ ತನಿಖೆಯ ಪ್ರಕಾರ, ವ್ಯವಹಾರದಲ್ಲಿ ಉಂಟಾಗಿದ್ದ ವಿಪರೀತ ಸಾಲಬಾಧೆಯಿಂದ ಚಿನ್ನದ ವ್ಯಾಪಾರಿಯ ಕುಟುಂಬದ ಈ ತೀವ್ರ ನಿರ್ಧಾರ ತೆಗೆದುಕೊಂಡಿದೆ ಎಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗಂಗಾವತಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
-
ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದ ಪ್ರಶಾಂತನಗರದಲ್ಲಿ ದಾರುಣ ಘಟನೆ ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ಮೂವರು ಸದಸ್ಯರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪ್ರಕಾಶ್ (54), ಅವರ ಪತ್ನಿ ಪ್ರಭಾ (46) ಹಾಗೂ ಮಗ ಶಶಾಂಕ್ (21) ಎಂದು ಗುರುತಿಸಲಾಗಿದೆ.
ಮೃತ ಪ್ರಕಾಶ್ ಅವರು ವೃತ್ತಿಯಲ್ಲಿ ಚಿನ್ನದ ಒಡವೆ ವ್ಯಾಪಾರಿಯಾಗಿದ್ದು, ರಾಯ್ಕರ್ ಜ್ಯುವೆಲರಿ ಶಾಪ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವ್ಯವಹಾರದಲ್ಲಿ ಉಂಟಾಗಿದ್ದ ವಿಪರೀತ ಸಾಲಬಾಧೆಯೇ ಕುಟುಂಬದ ಈ ತೀವ್ರ ನಿರ್ಧಾರಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಆರ್ಥಿಕ ಸಂಕಷ್ಟದಿಂದ ಬೇಸತ್ತು ಮೂವರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗಂಗಾವತಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
ಕಾರವಾರ: ಆರೋಗ್ಯ ಸಚಿವ ಯು.ಟಿ.ಖಾದರ್ (U.T. Khader) ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.
ಅಂಕೋಲಾದ ವರದರಾಜ್ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ. ಕಾರವಾರದಿಂದ ಉಡುಪಿ ಕಡೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಬೆಂಗಾವಲು ವಾಹನಗಳೊಂದಿಗೆ ಕರೆದೊಯ್ಯುವ ವೇಳೆ ಸ್ಕೂಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.
Davangere Murder: ಕಲ್ಲಿನಿಂದ ಜಜ್ಜಿ ಗಂಡನನ್ನೇ ಕೊಲೆಗೈದ ಪತ್ನಿ; ಶವ ಸಾಗಿಸಲು ಮಗ ಸಹಾಯ!
ಅಪಘಾತದಲ್ಲಿ ಅಲಗೇರಿ ಮೂಲದ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತವಾಗುತ್ತಿದ್ದಂತೆಯೇ ಸಚಿವ ಯು.ಟಿ.ಖಾದರ್ ಅವರು ಸ್ವತಃ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.