ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Koppal News: ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ; 6 ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಬಿಜೆಪಿ ಮುಖಂಡ  ವೆಂಕಟೇಶ ಹತ್ಯೆ ಪ್ರಕರಣ; ಹಂತಕರಿಗೆ ಗಲ್ಲು ಶಿಕ್ಷೆ

ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ (ಸಂಗ್ರಹ ಚಿತ್ರ) -

Ramesh Ballamoole
Ramesh Ballamoole Apr 30, 2026 5:10 PM

ಕೊಪ್ಪಳ, ಏ. 30: ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ (Venkatesh Kurbur Murder Case). ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಶಿಕ್ಷೆ ತೀರ್ಪು ಪ್ರಕಟಿಸಿದರು (Koppal News). ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದರು.

ಪ್ರಕರಣದ ಹಿನ್ನೆಲೆ

ಕೊಪ್ಪಳ ನಗರದ ಹೊರ ವಲಯದಲ್ಲಿರುವ ರಾಣಾ ಪ್ರತಾಪ್​ ಸಿಂಗ್ ವೃತ್ತದಲ್ಲಿರುವ ಖಾಸಗಿ ಆಸ್ಪತ್ರೆಯ ಬಳಿ 2025ರ ಅಕ್ಟೋಬರ್ 8ರ ಮಧ್ಯರಾತ್ರಿ ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ (32) ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಅಪರಾಧಿಗಳು ಪರಾರಿಯಾಗಿದ್ದರು.

ಊಟ ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ವೆಂಕಟೇಶ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಿಂಬಾಲಿಸಿದ ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿಯನ್ನು ಒಳಗೊಂಡ ಗುಂಪು, ದ್ವಿಚಕ್ರ ವಾಹನಕ್ಕೆ ಗುದ್ದಿ ಬೀಳಿಸಿದ್ದರು. ಬಳಿಕ ವೆಂಕಟೇಶನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಕೊಲೆ ಮಾಡಿತ್ತು.

ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಫೋಟೊ, ವಿಡಿಯೊಗಳು!

ಕಾರಣವೇನು?

ವೆಂಕಟೇಶ ಕೊಲೆಯ ಹಿಂದಿನ ಮತ್ತೊಂದು ಕೃತ್ಯವೂ ಬೆಳಕಿಗೆ ಬಂದಿದೆ. ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದರು ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಲಾಗಿತ್ತು. ಸದ್ಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟವಾಗಿದೆ.