ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

Koppala news: ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ, ರಸ್ತೆ ಬದಿ ನಡೆಯುತ್ತಿದ್ದ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ವೇಳೆ ಭಕ್ತರು ದೇವಾಲಯದಿಂದ ಕೇವಲ ಮೂರು ಗಂಟೆಗಳ ನಡಿಗೆಯ ದೂರದಲ್ಲಿದ್ದರು.

ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

-

ಹರೀಶ್‌ ಕೇರ ಹರೀಶ್‌ ಕೇರ Oct 7, 2025 7:17 AM

ಕೊಪ್ಪಳ: ಕೊಪ್ಪಳ‌ (Koppal news) ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ (devotees) ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ (bus) ಹರಿದು (road Accident) ಮೂವರು ದುರ್ಮರಣ (death) ಹೊಂದಿದ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19) ಎಂಬ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದು, ಹುಲಿಗೆಮ್ಮ ದೇವಾಲಯದ ಪಾದಯಾತ್ರೆಗೆ ತೆರಳುತ್ತಿದ್ದರು. ಘಟನೆಯಲ್ಲಿ ನಾಲ್ವರು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ವೇಳೆ ಭಕ್ತರು ದೇವಾಲಯದಿಂದ ಕೇವಲ ಮೂರು ಗಂಟೆಗಳ ನಡಿಗೆಯ ದೂರದಲ್ಲಿದ್ದರು. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Murder Case: ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

ಕಾರಿನಡಿ ಮಗು ಸಿಲುಕಿ ಸಾವು

ಬೆಂಗಳೂರು: ಬೆಂಗಳೂರಲ್ಲಿ (Bengaluru) ಘೋರವಾದ ದುರಂತ ಸಂಭವಿಸಿದೆ. ಕಾರು ಹರಿದು ಒಂದುವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ (Child Death) ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ (magadi road) ಬಳಿ ಸಂಭವಿಸಿದೆ. ಮನೆಯ ಮಾಲೀಕ ಸ್ವಾಮಿ ಎಂಬವರು ಬೆಳಿಗ್ಗೆ ಮನೆಯಿಂದ ಕಾರು ಹೊರ ತೆಗೆಯುತ್ತಿದ್ದ ವೇಳೆ, ಮನೆ ಬಾಡಿಗೆಗೆ ಇದ್ದ ಕುಟುಂಬದ ಸಂಬಂಧಿಕರ ಮಗು ಕಾರಿನಡಿಗೆ ಬಂದು ಸಿಲುಕಿ ಸಾವನ್ನಪ್ಪಿದೆ. ಕಾರನ್ನು ರಿವರ್ಸ್ ತೆಗೆಯುವಾಗ ಈ ದುರ್ಘಟನೆ ಸಂಭವಿಸಿದೆ.

ಒಂದುವರೆ ವರ್ಷದ ಮಹಮ್ಮದ್ ಉಮರ್ ಫಾರೂಕ್ ಎನ್ನುವ ಮಗು ಸಾವಿಗೀಡಾಗಿದ್ದು, ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕುಣಿಗಲ್‌ನ ಕುಟುಂಬ ಈ ಮನೆಯಲ್ಲಿ ಬಾಡಿಗೆಗೆ ವಾಸವಾಗಿದೆ. ಬಾಡಿಗೆ ಇದ್ದವರ ಸಂಬಂಧಿಕರು ತಮ್ಮ ಮಗುವಿನ ಸಮೇತ ಬಂಧುಗಳ ಮನೆಗೆ ಬಂದಿದ್ದರು. ಮನೆಯ ಹೊರಗಡೆ ಮಗು ಮಹಮ್ಮದ್ ಆಟ ಆಡುತ್ತಿದ್ದ. ಮನೆಯ ಮಾಲಿಕ ಕಾರು ರಿವರ್ಸ್ ತೆಗೆದುಕೊಳ್ಳುವಾಗ ಮಗುವಿನ ಮೇಲೆ ಕಾರು ಹರಿದು ಮಗು ಸಾವನ್ನಪ್ಪಿದೆ. ಕಾರಿನಡಿ ಮಗುವಿದ್ದದ್ದು ಮಾಲಿಕನಿಗೆ ಕಂಡುಬರದೆ ಇದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.