ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Koppal Tractor accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿಯಾಗಿ 7 ಮಂದಿ ದುರ್ಮರಣ!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರಲಯನಹಳ್ಳಿ ನಿವಾಸಿಗಳು, ಕೊಪ್ಪಳದ ಹುಲಿಗಮ್ಮ ದೇವಸ್ಥಾನಕ್ಕೆ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಮುನಿರಾಬಾದ್ ಬಳಿ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ತುಂಗಭದ್ರಾ ಸೇತುವೆಯಿಂದ ಟ್ರ್ಯಾಕ್ಟರ್‌ ಕೆಳಗೆ ಬಿದ್ದು, ದುರಂತ ಸಂಭವಿಸಿದೆ.

ಕೊಪ್ಪಳದಲ್ಲಿ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿಯಾಗಿ 7 ಮಂದಿ ದುರ್ಮರಣ!

ಮುನಿರಾಬಾದ್ ಬಳಿ ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದಿರುವುದು. -

Prabhakara R
Prabhakara R May 15, 2026 4:58 PM

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ (Koppal Tractor accident) ಹೊಡೆದ ಪರಿಣಾಮ ಟ್ರ್ಯಾಕ್ಟರ್, ಸೇತುವೆ ಮೇಲಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಏಳು ಜನ ಸ್ಥಳದಲ್ಲೇ ಮೃತಪಟ್ಟುಮ ಹಲವರು ಗಾಯಗೊಂಡಿದ್ದಾರೆ. ತುಂಗಭದ್ರಾ ಸೇತುವೆ ಬಳಿ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮೃತಪಟ್ಟ ದುರ್ದೈವಿಗಳು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರಲಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಒಂದೇ ಕುಟುಂಬದ ಸದಸ್ಯರು ಮತ್ತು ಅವರ ಸಂಬಂಧಿಕರು ಸೇರಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಪ್ಪಳದ ಹುಲಿಗಮ್ಮ ದೇವಸ್ಥಾನಕ್ಕೆ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಮುನಿರಾಬಾದ್ ಠಾಣೆ ಪೋಲಿಸರು ಹಾಗೂ ವಿಜಯನಗರ ಠಾಣೆ ಪೋಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.