ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basanagouda Patil Yatnal: ದಲಿತ ಮಹಿಳೆಯರಿಗೆ ಅಪಮಾನ ಆರೋಪ; ಶಾಸಕ ಯತ್ನಾಳ್ ವಿರುದ್ಧ ಅಟ್ರಾಸಿಟಿ ಕೇಸ್‌

Basanagouda Patil Yatnal: ಸನಾತನ ಧರ್ಮದವರು ಮಾತ್ರ ಚಾಮುಂಡಿಗೆ ಪೂಜಿಸಬೇಕು. ಸಾಮಾನ್ಯ ದಲಿತ ಮಹಿಳೆಗೂ ಯತ್ನಾಳ್ ಅವಕಾಶ ಇಲ್ಲ ಅಂತ ಶಾಸಕ ಯತ್ನಾಳ್‌ ಹೇಳಿಕೆ ನೀಡಿದ್ದಾರೆ. ದಲಿತ ಮಹಿಳೆಯರಿಗೆ ಅಪಮಾನ ಮಾಡಿರುವ ಶಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದ್ದರಿಂದ ಯತ್ನಾಳ್‌ ವಿರುದ್ಧ ಕೇಸ್‌ ದಾಖಲಾಗಿದೆ.

ದಲಿತ ಮಹಿಳೆಯರಿಗೆ ಅಪಮಾನ; ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್‌

-

Prabhakara R Prabhakara R Sep 16, 2025 10:39 PM

ಕೊಪ್ಪಳ: ದಲಿತ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳದಲ್ಲಿ ಎಫ್ಐಆರ್ ದಾಖಲಾಗಿದೆ. ಚಾಮುಂಡಿ ತಾಯಿಗೆ ಹೂ ಮುಡಿಸಲು ಸನಾತನ ಧರ್ಮದವರಿಗೆ ಮಾತ್ರ ಅವಕಾಶ ಇದೆ. ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂಬ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಯತ್ನಾಳ್‌ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ.

ದಲಿತ ವಿಮೋಚನೆಯ ಮಾನವ ಹಕ್ಕು ಹೋರಾಟ ವೇದಿಕೆಯ ಕೊಪ್ಪಳ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ್ ಪೂಜಾರ ನೀಡಿದ ದೂರಿನ ಮೇರೆಗೆ ಶಾಸಕ ಯತ್ನಾಳ್‌ ವಿರುದ್ಧ ಎಸ್‌ಸಿ.ಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರ ಆಯ್ಕೆ ವಿರೋಧಿಸಿ ಮಾತನಾಡುವ ವೇಳೆ, ಸನಾತನ ಧರ್ಮದವರು ಮಾತ್ರ ಚಾಮುಂಡಿಗೆ ಪೂಜಿಸಬೇಕು. ಸಾಮಾನ್ಯ ದಲಿತ ಮಹಿಳೆಗೂ ಯತ್ನಾಳ್ ಅವಕಾಶ ಇಲ್ಲ ಅಂತ ಯತ್ನಾಳ್‌ ಹೇಳಿಕೆ ನೀಡಿದ್ದಾರೆ. ದಲಿತ ಮಹಿಳೆಯರಿಗೆ ಅಪಮಾನ ಮಾಡಿರುವ ಶಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿತ್ತು. ಹೀಗಾಗಿ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲು ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ | Basangouda Patil Yatnal: ಮದ್ದೂರಿನಲ್ಲಿ ಹಿಂದೂ ಫೈರ್‌ ಬ್ರ್ಯಾಂಡ್‌ ಯತ್ನಾಳ್‌ ಗರ್ಜನೆ; ಹೊಸ ಪಕ್ಷ ಘೋಷಣೆ

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ‌

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ (Mysuru dasara) ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ (Banu mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ (karnataka high court) ವಜಾಗೊಳಿಸಿದೆ. ಬಾನು ಮುಷ್ತಾಕ್‌ ಆಯ್ಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರು ಪಿಐಎಲ್‌ ಸಲ್ಲಿಸಿದ್ದರು.

ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದಸರಾ (Mysuru Dasara) ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್‌ರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನೋದು ಅರ್ಜಿದಾರರ ಮನವಿ ಆಗಿತ್ತು.

ಇದನ್ನೂ ಓದಿ: Banu Mushtaq: ಬಾನು ಮುಷ್ತಾಕ್ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದರೆ ಉತ್ತಮವಾಗುತ್ತಿತ್ತು: ನಟ ಅವಿನಾಶ್

ದಸರಾ (Mysuru Dasara) ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಭಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ವಾದ ಆಲಿಸಿದ ನ್ಯಾಯಪೀಠ, ಈ ಅರ್ಜಿಗಳ ಮುಂದಿನ ವಿಚಾರಣೆ ಅಗತ್ಯವಿಲ್ಲ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.