ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಪತಿ ಕಿರುಕುಳ; ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆ!

Self Harming: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ಘಟನೆ ನಡೆದಿದೆ. ಪತಿ ನಿತ್ಯ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆತನ ಹಿಂಸೆಗೆ ಮನನೊಂದು ಪತ್ನಿ, ಪುಟ್ಟ ಮಗಳೊಂದಿಗೆ ಸೇರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

Profile Prabhakara R Apr 11, 2025 6:43 PM

ಕೊಪ್ಪಳ: ಕೌಟುಂಬಿಕ ಕಲಹಕ್ಕೆ ಮನನೊಂದ ಮಹಿಳೆ, 5 ವರ್ಷದ ಮಗಳ ಜತೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವುದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು ಮಗುವನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಂಗಲಾ ಮೃತ ಮಹಿಳೆ. 5 ವರ್ಷದ ಮಗಳ ಸ್ಥಿತಿ ಗಂಭೀರವಾಗಿದೆ. ಪತ್ನಿ ಸುಮಂಗಲಾಗೆ ಪತಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಆತನ ಹಿಂಸೆಗೆ ಮನನೊಂದ ಸುಮಂಗಲ, ಪುಟ್ಟ ಮಗಳೊಂದಿಗೆ ಸೇರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸುದ್ದಿಯನ್ನೂ ಓದಿ | Viral Video: ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್ ; ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ; ಯುವಕ-ಯುವತಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ

ಬೆಂಗಳೂರು: ನೈತಿಕ ಪೊಲೀಸ್ ಗಿರಿ (Moral policing) ನಡೆಸಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಕೂಟರ್‌ನಲ್ಲಿ ಕುಳಿತಿದ್ದ ಯುವಕ-ಯುವತಿಯ ಮೇಲೆ ನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಹಲ್ಲೆ ನಡೆಸಲಾಗಿದೆ. ಯುವಕ ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಸಾರ್ವಜನಿಕರು ತೀವೃ ಆಕ್ರೋಶ ವ್ಯಕ್ತಪಡಿಸಿದ್ದರು. ಶನಿವಾರ ಸಂಜೆ ಹಿಂದೂ ಯುವಕನ ಜೊತೆಗಿದ್ದ ಯುವತಿಯನ್ನು ನಿಲ್ಲಿಸಿ ಹಿಂದೂ ಯುವಕನ ಜೊತೆಗೆ ಯಾಕೆ ಇದ್ದೀಯಾ ಎಂದು ಪ್ರಶ್ನಿಸಿ ಹಿಂದೂ ಯುವಕನ ಮೇಲೆ ಹಲ್ಲೆಗೆ ಮುಂದಾಗಿದ್ದರು. ಸಂತ್ರಸ್ತರು ದೂರು ಸಲ್ಲಿಸಿದ ನಂತರ ಪ್ರಕರಣ ದಾಖಲಿಸಿಕೊಂಡ ಚಂದ್ರಾ ಲೇಔಟ್ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಂದ್ರಾಲೇಔಟ್‌ನ ಪಾರ್ಕ್ ಬಳಿ ಬೆಳಗ್ಗೆ ಸ್ಕೂಟರ್‌ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ-ಯುವತಿಯನ್ನು ಗುಂಪೊಂದು ಬಂದು ಕಿರುಕುಳ ನೀಡಿದೆ. ನೀವಿಬ್ಬರು ಇಲ್ಲಿ ಏನು ಮಾಡುತ್ತೀದ್ದೀರಿ? ಇದು ನಮ್ಮ ಏರಿಯಾ” ಎಂದು ಹೇಳಿದ ಗುಂಪು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆ ಯುವಕ, ಯುವತಿ “ನಾವು ಸ್ನೇಹಿತರು, ಮಾತಾಡುತ್ತಿದ್ದೇವೆ” ಎಂದು ಹೇಳಿದರೂ, ಆ ಗ್ಯಾಂಗ್ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆ. ಬುರ್ಕಾ ಧರಿಸಿ ಹಿಂದೂ ಹುಡುಗನ ಜೊತೆ ಯಾಕೆ ಕುಳಿತುಕೊಂಡಿದ್ದೀಯಾ ಎಂದು ಆಕೆಗೆ ಪ್ರಶ್ನೆ ಮಾಡಿದ್ದಾರೆ. ನಾವು ಸುಮ್ಮನೇ ಕುಳಿತು ಮಾತನಾಡುತ್ತಿದ್ದೆವು ಎಂದು ಹೇಳಿದರೂ ಕೇಳದೆ, ಯುವತಿಯ ಜಡೆಯನ್ನು ಹಿಡಿದು ಎಳೆದು, ಇಬ್ಬರ ಮೇಲೂ ಹೊಡೆದು ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಿಮ್ಮ ತಂದೆ ತಾಯಿಗೆ ಹೇಳುತ್ತೇವೆ ಅವರ ನಂಬರ್‌ ಕೊಡಿ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Physical Abuse: ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ, ಅಣ್ಣನಿಗೆ ಹಲ್ಲೆ ಮಾಡಿ ಯುವತಿಯ ಸಾಮೂಹಿಕ ಅತ್ಯಾಚಾರ

ಯುವಕನ ಮೇಲೆ ಹಲ್ಲೆ ಮಾಡಿರುವುದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ. ನಂತರ ಆ ಗ್ಯಾಂಗ್‌ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಹಲ್ಲೆಗೆ ಒಳಗಾದ ಯುವಕ, ಯುವತಿ ಸ್ಥಳೀಯ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ ಪೊಲೀಸರು ಸೈಯದ್‌, ಶಾಹಿಲ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ದೌರ್ಜನ್ಯ, ಹಲ್ಲೆ ಆರೋಪಗಳನ್ನು ದಾಖಲಿಸಲಾಗಿದೆ.