ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Korean Game: ಕೊರಿಯನ್‌ ಗೇಮ್‌ ಗೀಳಿಗೆ ಧಾರವಾಡದಲ್ಲಿ ಯುವಕ ಬಲಿ

ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಫೆ.6 ರಂದು ಯುವಕ ಸಾವಿಗೆ ಶರಣಾಗಿದ್ದ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕೊರಿಯನ್ ಗೇಮ್ಸ್ ಪತ್ತೆಯಾಗಿದೆ. ಕೊರಿಯನ್ ಗೇಮ್ಸ್‌ಗೆ ವಿಕಾಸ್ ಅಡಿಕ್ಟ್ ಆಗಿದ್ದ‌ ಎಂಬ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ.

ಕೊರಿಯನ್‌ ಗೇಮ್‌ ಗೀಳಿಗೆ ಧಾರವಾಡದಲ್ಲಿ ಯುವಕ ಬಲಿ

ಮೃತಪಟ್ಟ ವಿಕಾಸ್ -

ಹರೀಶ್‌ ಕೇರ
ಹರೀಶ್‌ ಕೇರ Feb 14, 2026 12:28 PM

ಧಾರವಾಡ, ಫೆ.14: ಗಾಜಿಯಾಬಾದ್‌ನಲ್ಲಿ ಕೊರಿಯನ್‌ ಗೇಮ್‌ (Korean Game addiction) ಗೀಳಿಗೆ ಬಿದ್ದು ಮೂವರು ಸೋದರಿಯರು ಆತ್ಮಹತ್ಯೆ ಮಾಡಿಕೊಂಡ ಕರಾಳ ಘಟನೆ ಇನ್ನೂ ನೆನಪಿನಿಂದ ಮಾಸುವ ಮೊದಲೇ, ಕೊರಿಯನ್ ಗೇಮ್‍ ವ್ಯಸನದಿಂದ ಯುವಕನೊಬ್ಬ ಆತ್ಮಹತ್ಯೆ (self harm) ಮಾಡಿಕೊಂಡ ಘಟನೆ ಧಾರವಾಡ (Dharawad) ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಫೆ.6 ರಂದು ಯುವಕ ಸಾವಿಗೆ ಶರಣಾಗಿದ್ದ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕೊರಿಯನ್ ಗೇಮ್ಸ್ ಪತ್ತೆಯಾಗಿದೆ. ಕೊರಿಯನ್ ಗೆಮ್ಸ್‌ಗೆ ವಿಕಾಸ್ ಅಡಿಕ್ಟ್ ಆಗಿದ್ದ‌ ಎಂಬ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ.

ಪಿಯುಸಿ ಸೈನ್ಸ್ ಮುಗಿಸಿ ಮನೆಯಲ್ಲೇ ಇದ್ದ ವಿಕಾಸ್ ಯಾರಿಗೂ ಗೊತ್ತಿಲ್ಲದೇ ಗೇಮ್ಸ್ ಆಡುತ್ತಿದ್ದ. ಸಾವಿಗೂ ಮುನ್ನ, ನನ್ನ ಸಾವಿಗೆ ನಾನೇ ಕಾರಣ ಎಂದು ಸೆಲ್ಫ್ ಮೆಸೇಜ್ ಮಾಡಿ‌ ಸಾವಿಗೀಡಾಗಿದ್ದ. ಈ ಸಂಬಂಧ ಅಸಹಜ ಸಾವು ಎಂದು ದೂರು ದಾಖಲಾಗಿತ್ತು.

ಆನ್‌ಲೈನ್ ಜೂಜಿಗೆ ಬ್ಯಾಂಕ್‌ನಿಂದಲೇ ಚಿನ್ನಾಭರಣ ಕದ್ದ ಉದ್ಯೋಗಿ

ಬೆಂಗಳೂರು: ರಾಜ್ಯದಲ್ಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದಾನೆ. ಅಸಿಸ್ಟೆಂಟ್ ಮ್ಯಾನೇಜರ್‌ನಿಂದಲೇ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ.

ಇಂಡಿಯನ್ ಬ್ಯಾಂಕ್‌ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕದ್ದಿದ್ದಾನೆ. ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಅದಕ್ಕಾಗಿ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಆನ್ಲೈನ್ ಜೂಜಾಟಕ್ಕೆ ಬಳಸಿದ್ದಾನೆ. ಸದ್ಯ ಆರೋಪಿ ಕಿರಣ್ ಅನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ.