ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lawyer Jagadish: 93 ದಿನಗಳ ಬಳಿಕ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್ ಜೈಲಿನಿಂದ ರಿಲೀಸ್

Lawyer Jagadish: ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಜನವರಿ 25ರಂದು ಬಂಧನವಾಗಿದ್ದ ಲಾಯರ್‌ ಜಗದೀಶ್‌, ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ ಎಂದು ತಿಳಿದುಬಂದಿದೆ.

93 ದಿನಗಳ ಬಳಿಕ ಲಾಯರ್​ ಜಗದೀಶ್ ಜೈಲಿನಿಂದ ರಿಲೀಸ್

Profile Prabhakara R Apr 30, 2025 12:03 PM

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ (Lawyer Jagadish) ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಲಾಯರ್‌ ಜಗದೀಶ್‌ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, ತಮಗೆ ಜಾಮೀನು ಸಿಕ್ಕಿರುವುದಾಗಿ ಹೇಳಿದ್ದಾರೆ. ನಾನು ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದಿರುವ ಜಗದೀಶ್‌, PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡಲ್‌ನ್ನು ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೆಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು ... ಇವೆಲ್ಲವೂ ನನ್ನ ಹೋರಾಟದ ಭಾಗ.

ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳೀಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ ಎಂದು ಹೇಳಿದ್ದಾರೆ.



ಏನಿದು ಪ್ರಕರಣ?

ಬೆಂಗಳೂರಿನಲ್ಲಿ ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು.

ರಸ್ತೆಯಲ್ಲಿ ಅಣ್ಣಮ್ಮ ದೇವಿಯ ಉತ್ಸವಕ್ಕೆ ವಿರೋಧ ಮಾಡಿದ್ದಕ್ಕೆ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಮಾರಾಮಾರಿಯಾಗಿತ್ತು. ಜಗದೀಶ್ ಕುಮಾರ್ ಅವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದರಿಂದ, ವಕೀಲರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿತ್ತು. ಗಲಾಟೆಯಲ್ಲಿ ಲಾಯರ್ ಜಗದೀಶ್ ಗಾಯಗೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ಗಲಾಟೆ ಸಂಬಂಧ ದೂರು ದಾಖಲಾಗಿದ್ದರಿಂದ ಪೊಲೀಸರು ಜಗದೀಶ್‌ ಅವರನ್ನು ಬಂಧಿಸಿದ್ದರು.

ಈ ಸುದ್ದಿಯನ್ನೂ ಓದಿ | Lakshmi Hebbalkar : ಅಧಿಕಾರಿಗೆ ಕಪಾಳಮೋಕ್ಷಕ್ಕೆ ಮುಂದಾಗಿದ್ದ ಸಿಎಂ; ಅಚಾತುರ್ಯ ನಡೆದಿದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮರ್ಥನೆ