ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಕೇಂದ್ರ ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಚಿವೆ ಹೆಬ್ಬಾಳ್ಕರ್‌ ಚರ್ಚೆ

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಇಂದು ನವ‌ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕೇಂದ್ರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಚರ್ಚೆ

-

Profile
Siddalinga Swamy Jun 11, 2025 9:36 PM

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Laxmi Hebbalkar) ಅವರು ನವ‌ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪೂರೈಕೆ ಆಗಬೇಕಿರುವ ಅಕ್ಕಿ, ಗೋಧಿ, ಅನುದಾನ ಹಾಗೂ ಅಂಗನವಾಡಿ ಎಫ್‌ಆರ್‌ಎಸ್‌ (FRS) ಗಳಲ್ಲಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸುದೀರ್ಘ ಕಾಲ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಹೆಚ್ಚುವರಿ ಕಾರ್ಯದರ್ಶಿಗಳಾದ ಪ್ರೀತಮ್ ಯಶವಂತ, ಜ್ಞಾನೇಶ್ ಭಾರತಿ, ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಬಿ.ಎಚ್, ಕಾರ್ಯದರ್ಶಿಗಳಾದ ಶ್ಯಾಮ್ಲಾ ಇಕ್ಬಾಲ್ ಉಪಸ್ಥಿತರಿದ್ದರು.‌

ಈ ಸುದ್ದಿಯನ್ನೂ ಓದಿ | MSP for Mangoes: ಮಾವಿಗೆ ಬೆಂಬಲ ಬೆಲೆ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಭರವಸೆ