ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026: ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ವಿತ್ತೀಯ ಶಿಸ್ತಿನ ನಿಯಮವನ್ನು ಪಾಲಿಸುತ್ತಿದ್ದೇವೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಸಂಖ್ಯೆ ಬದಲಿಸುವ ಜಾದೂಗಾರನಂತೆ ಈ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ

ಛಲವಾದಿ ನಾರಾಯಣಸ್ವಾಮಿ (ಸಂಗ್ರಹ ಚಿತ್ರ) -

Profile
Siddalinga Swamy Mar 6, 2026 10:13 PM

ಬೆಂಗಳೂರು, ಮಾ. 6: ರಾಜ್ಯಕ್ಕೆ ಹೆಚ್ಚು ಆದಾಯ ಬರಲಿದೆ ಎಂಬ ನಾಟಕವನ್ನು ಈ ಬಾರಿ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ (Karnataka Budget 2026) ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆರೋಪಿಸಿದ್ದಾರೆ. ಶುಕ್ರವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಸಾಲದ ಪ್ರಮಾಣವನ್ನು 2025-26ರಲ್ಲಿ ಪರಿಷ್ಕೃತ ಅಂದಾಜಿನ ಪ್ರಕಾರ 1 ಲಕ್ಷ 16 ಸಾವಿರದ 170 ಕೋಟಿ ರುಪಾಯಿ ಎಂದು ಅಂದಾಜಿಸಲಾಗಿತ್ತು. 2026-27ರ ಪ್ರಕಾರ 1 ಲಕ್ಷ 32 ಸಾವಿರದ 190 ಕೋಟಿ ರುಪಾಯಿ ಎಂದು ಹೇಳಲಾಗಿದೆ. ಸಾಲದ ಪ್ರಮಾಣದಲ್ಲಿ ಏರಿಕೆ ಸುಮಾರು 16 ಸಾವಿರ ಕೋಟಿ ರುಪಾಯಿ. ಈ ಹಣದಲ್ಲಿ ಬಡ್ಡಿ ಪಾವತಿ ಮೊತ್ತ ಕಳೆದ ವರ್ಷಕ್ಕಿಂತ 7 ಸಾವಿರ ಕೋಟಿ ರುಪಾಯಿ ಹೆಚ್ಚಾಗಲಿದೆ ಎಂದರು.

ವಿತ್ತೀಯ ಶಿಸ್ತಿನ ನಿಯಮವನ್ನು ಪಾಲಿಸುತ್ತಿದ್ದೇವೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಸಂಖ್ಯೆ ಬದಲಿಸುವ ಜಾದೂಗಾರನಂತೆ ಈ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಬಜೆಟ್‌ ವಿರುದ್ಧ ಬಿಜೆಪಿ ವತಿಯಿಂದ ಶುಕ್ರವಾರ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಮುಖರು ಕೈಯಲ್ಲಿ ಖಾಲಿ ಚೊಂಬನ್ನು ಪ್ರತಿಭಟನೆಯ ವೇಳೆ ಪ್ರದರ್ಶಿಸಿದರು.

ಕರ್ನಾಟಕದ ಪಾಲಿಗೆ ಮತ್ತೊಂದು ಪೊಳ್ಳು ಭರವಸೆಯ ಬಜೆಟ್: ವಿಜಯೇಂದ್ರ ಕಿಡಿ

ಯುವಕರಿಗೆ ಮೋಸ ಮಾಡಿದ ಸರ್ಕಾರಕ್ಕೆ ಧಿಕ್ಕಾರ, 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಬಜೆಟ್ಟಂತೆ ಬಜೆಟ್ ಖಾಲಿ ಚೊಂಬಿನ ಬಜೆಟ್- ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು.

ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರ್ಕಾರಕ್ಕೆ ಧಿಕ್ಕಾರ ಎಂದು ಪ್ರತಿಭಟನೆಯಲ್ಲಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.‌‌