ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lokayukta Raid: ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೇರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

-

ಹರೀಶ್‌ ಕೇರ
ಹರೀಶ್‌ ಕೇರ Dec 31, 2025 7:41 AM

ಬೆಂಗಳೂರು, ಡಿ. 31 : ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಿಡಿಎ ನೌಕರ ವೆಂಕಟೇಶ ನಿವಾಸದ ಮೇಲೆ ಇದೀಗ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಬಿಡಿಎ ನೌಕರ ವೆಂಕಟೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೇರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

20 ದಿನದಲ್ಲಿ ಸಂಚಾರಿ ನಿಯಮ ಉಲ್ಲಂಘನೆ 58,352 ಪ್ರಕರಣ ದಾಖಲು, 2 ಲಕ್ಷ ದಂಡ ವಸೂಲಿ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ಮಾಡಿರುವ ಈ 20 ದಿನದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ಸಂಬಂಧ 58,352 ಪ್ರಕರಣ ದಾಖಲು ಮಾಡಲಾಗಿದ್ದು 2,58,03,400 ದಂಡ ವಸೂಲಿ ಮಾಡಲಾಗಿದೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ತಿಳಿಸಿದರು.

ನಗರ ಹೊರವಲಯ ಅಣಕನೂರು ಸಮೀಪದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಆವರಣದಲ್ಲಿ 2025ನೇ ಸಾಲಿನಲ್ಲಿ ನಡೆದಿರುವ ಎಲ್ಲಾ ಕಳವು ಮಾಲುಗಳನ್ನು ಮಾಲಿಕರಿ ವಿತರಿಸುವ ಸಂಬಂಧ ಏರ್ಪಡಿಸಿದ್ದ ಕಳವು ಮಾಲು ಪ್ರದರ್ಶನ ಹಾಗೂ ಮಾಲೀಕರಿಗೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟುವಿಕೆಯ ಬಿರುಸಿನ ಕಾರ್ಯಾಚರಣೆಗಳ ನಡುವೆ ಜನರಲ್ಲಿ ಅರಿವು ಮೂಡಿಸುವ ಪರಿಣಾಮಕಾರಿ ಚಟುವಟಿಕೆ ಕೈಗೊಳ್ಳಲಾಗುತ್ತಿದೆ. ಜಾಗೃತಿ ಜತೆಗೆ ತ್ವರಿಯ ಕಾರ್ಯಾ ಚರಣೆಯಿಂದಾಗಿ ಕಳೆದ ಸಾಲಿಗಿಂತಲೂ  ಈ ಭಾರಿ ಹೆಚ್ಚಿನ ಪ್ರಕರಣ ದಾಖಲಾಗುವಿಕೆ, ಆರೋಪಿ ಗಳ ಬಂಧನ, ಅಪಾರ ಪ್ರಮಾಣದ ಮಾಲು ವಶದಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಲಾಗಿದೆ. ಇದರಲ್ಲಿ ಸಿಬ್ಬಂದಿ ಚುರುಕಿನ ಕಾರ್ಯ ನಿರ್ವಹಣೆ ಮಹತ್ತರವಾದುದು ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.